ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಖಗಾರಿಯಾದಲ್ಲಿ ಜೆಡಿಯು ನಾಯಕನ ಭೀಕರ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಗುರುವಾರ ಹಾಡಹಗಲೇ ಬಿಹಾರ ಸಿಎಂ ನಿತೀಶ್ ಕುಮಾರ್ ಪಕ್ಷದ ನಾಯಕ ರಾಜ್ಕಿಶೋರ್ ನಿಶಾದ್ ಅವರನ್ನು ಕಬ್ಬಿಣ ರಾಡ್ನಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಎರಡು ದಿನಗಳ ಹಿಂದೆ ಪಾಟ್ನಾದಲ್ಲಿ ಬಿಜೆಪಿ ನಾಯಕ ಸುರೇಂದ್ರ ಕೆವಾತ್ (52) ಅವರನ್ನು ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಲೆಗೈದಿದ್ದರು. ಕೂಡಲೇ ಅವರನ್ನು ಪಾಟ್ನಾದ ಏಮ್ಸ್ಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.