July 29, 2026
Wednesday, July 29, 2026
spot_img

ಕಾಶ್ಮೀರದಲ್ಲಿ ಮತ್ತೆ ಗುಂಡಿನ ಚಕಮಕಿ: ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಸೇನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಮತ್ತೆ ಗುಂಡಿನ ಚಕಮಕಿ ನಡೆದಿದ್ದು, ಒಳನುಸುಳುವಿಕೆಗೆ ಯತ್ನಿಸಿದ ಪಾಕಿಸ್ತಾನಿ ಭಯೋತ್ಪಾದಕನನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಈ ಕುರಿತು ಮಾಹಿತಿ ನೀಡಿದ ಶ್ರೀನಗರದ ಚಿನಾರ್ ಕಾರ್ಪ್ಸ್, ಭಯೋತ್ಪಾದಕ ಒಳನುಸುಳುವಿಕೆಗೆ ಯತ್ನಿಸುವ ಕುರಿತು ನಿಖರ ಮಾಹಿತಿ ಆಧರಿಸಿ, ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಅನುಮಾನಾಸ್ಪದ ಚಲನವಲನ ಗಮನಿಸಿದ ಸೈನಿಕರು, ಓರ್ವ ಭಯೋತ್ಪಾದಕನ್ನು ಸೆರೆಹಿಡಿಯಲು ಯತ್ನಿಸಿದಾಗಗುಂಡು ಹಾರಿಸಿದ್ದು, ಇದಕ್ಕೆ ಪ್ರತ್ಯುತ್ತರವಾಗಿ ಸೇನೆ ದಾಳಿ ನಡೆಸಿದೆ.

ಹತ್ಯೆಗೀಡಾದ ಭಯೋತ್ಪಾದಕನಿಂದ ಎಕೆ ರೈಫಲ್, ಪಿಸ್ತೂಲುಗಳು ಮತ್ತು ದೊಡ್ಡ ಪ್ರಮಾಣದ ಮದ್ದುಗುಂಡುಗಳು ಸೇರಿದಂತೆ ಯುದ್ಧೋಚಿತ ಮಳಿಗೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಸೇನೆ ಹೇಳಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !