October 10, 2026
Saturday, October 10, 2026
spot_img

ಇರಾನ್‌ಗೆ ಮತ್ತೊಂದು ಮರ್ಮಾಘಾತ: ಪ್ರಜ್ಞಾಹೀನ ಸ್ಥಿತಿಯಲ್ಲಿ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದಲ್ಲಿ ಯುದ್ಧದ ಉದ್ವಿಗ್ನತೆ ಗರಿಷ್ಠ ಮಟ್ಟ ತಲುಪಿರುವ ಈ ಸಂದರ್ಭದಲ್ಲಿ ಇರಾನ್‌ನ ನಾಯಕತ್ವದ ಬಗ್ಗೆ ಹೊಸ ಆತಂಕಕಾರಿ ವರದಿಗಳು ಹೊರಬಂದಿವೆ.

ಅಮೆರಿಕದ ಕದನ ವಿರಾಮ ಎಚ್ಚರಿಕೆ ಮತ್ತು ಭಾರೀ ದಾಳಿ ಸಾಧ್ಯತೆಗಳ ನಡುವೆಯೇ, ಇರಾನ್‌ನ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಜೋರಾಗಿದೆ. ಕೆಲವು ಮಾಧ್ಯಮ ವರದಿಗಳ ಪ್ರಕಾರ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ.

ಇದನ್ನೂ ಓದಿ:

ಗುಪ್ತಚರ ಮೂಲಗಳನ್ನು ಉಲ್ಲೇಖಿಸಿದ ವರದಿಗಳ ಪ್ರಕಾರ, ಮೊಜ್ತಬಾ ಖಮೇನಿ ಅವರನ್ನು ಕೋಮ್ ನಗರದಲ್ಲಿನ ರಹಸ್ಯ ಸ್ಥಳವೊಂದರಲ್ಲಿ ಇರಿಸಿ ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ. ಆದರೆ ಈ ಕುರಿತು ಇರಾನ್ ಸರ್ಕಾರ ಅಥವಾ ಸೇನಾ ವಲಯದಿಂದ ಯಾವುದೇ ಅಧಿಕೃತ ದೃಢೀಕರಣ ಇನ್ನೂ ಲಭ್ಯವಾಗಿಲ್ಲ. ಇದೇ ಕಾರಣದಿಂದ ಈ ವರದಿಗಳ ಬಗ್ಗೆ ಹಲವು ಊಹಾಪೋಹಗಳು ಹರಿದಾಡುತ್ತಿವೆ.

ಇದರ ಜೊತೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಕದನ ವಿರಾಮದ ಅಂತಿಮ ಎಚ್ಚರಿಕೆ ನೀಡಿರುವುದು ಪರಿಸ್ಥಿತಿಯನ್ನು ಇನ್ನಷ್ಟು ಗಂಭೀರಗೊಳಿಸಿದೆ. ಒಪ್ಪಂದಕ್ಕೆ ಬಾರದಿದ್ದರೆ ಭಾರೀ ದಾಳಿಯ ಸಾಧ್ಯತೆಯನ್ನು ಅವರು ಸೂಚಿಸಿದ್ದು, ಜಾಗತಿಕ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Must Read