ಮತ್ತೊಂದು ಹೀನಾಯ ಕೃತ್ಯ : 10 ವರ್ಷದ ಬಾಲಕಿ ಮೇಲೆ ರೇಪ್‌, ಗುಪ್ತಾಂಗಕ್ಕೆ ರಾಡ್‌ ತುರುಕಿ ವಿಕೃತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹತ್ತು ವರ್ಷದ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ ಗುಪ್ತಾಂಗಕ್ಕೆ ರಾಡ್ ಹಾಕಿ ಚಿತ್ರಹಿಂಸೆ ಕೊಟ್ಟಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ.

ಗುಜರಾತ್​ನ ಭರೂಚ್​ನಲ್ಲಿ ಈ ಘಟನೆ ನಡೆದಿದೆ, 36 ವರ್ಷದ ವ್ಯಕ್ತಿಯೊಬ್ಬ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದಾನೆ. ಆತ ಜಾರ್ಖಂಡ್​ ಮೂಲದವನಾಗಿದ್ದು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ಸಂತ್ರಸ್ತೆಯ ತಂದೆಯೊಂದಿಗೆ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ.ಭರೂಚ್‌ನ ಝಗರಿಯಾ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ಈ ಘಟನೆ ನಡೆದಿದೆ. ಬಾಲಕಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು, ಗಾಯದಿಂದಾಗಿ ಪರಿಸ್ಥಿತಿ ಹದಗೆಟ್ಟಿತ್ತು ಕೂಡಲೇ ಶಸ್ತ್ರಚಿಕಿತ್ಸೆ ಮಾಡಬೇಕಾಯಿತು.

ಸಂತ್ರಸ್ತೆಯನ್ನು ವಡೋದರಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎನ್​ಡಿಟಿವಿ ವರದಿ ಪ್ರಕಾರ ವಿಜಯ್ ಪಾಸ್ವಾನ್ ಎಂಬ ವ್ಯಕ್ತಿ ಅಪಾಯಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಮತ್ತು ಆಕೆಯ ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್ ಹಾಕಿ ದುಷ್ಕೃತ್ಯ ಮೆರೆದಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಯೂರ್ ಚಾವ್ಡಾ ಹೇಳಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!