ಹೊಸದಿಗಂತ ವರದಿ,ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜೊತೆಗೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಲು ಸಮೀಪ ಗುಡ್ಡ ಕುಸಿತವಾಗಿದೆ. ಪರಿಣಾಮ ಕೆಲವು ವಾಹನಗಳು ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿವೆ .
ಇನ್ನು ಗುಡ್ಡ ಕುಸಿತದ ರಭಸಕ್ಕೆ ಬೃಹತ್ ಕಂಟೇನರ್ ಪಲ್ಟಿಯಾಗಿದ್ದು, ಚಾಲಕ ಪಲ್ಟಿಯಾಗಿರುವ ಕಂಟೇನರ್ನಲ್ಲಿ ಸಿಲುಕಿದ್ದಾನೆ. ಈ ಹಿನ್ನಲೆ ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ವಾಹನ ಸಂಚಾರ ಬಂದ್ ಆಗಿದ್ದು, ಶಿರಾಡಿಘಾಟ್ ರಸ್ತೆಯಲ್ಲಿ ಹಲವು ವಾಹನಗಳು ಸಿಲುಕಿವೆ .
ಹೀಗಾಗಿ ಸದ್ರಿ ಮಾರ್ಗವಾಗಿ ಸಂಚರಿಸುವ ವಾಹನಗಳು ಬದಲಿ ಮಾರ್ಗವನ್ನು ಬಳಸಬೇಕಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.