ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಆಂಡ್ ರನ್ ಪ್ರಕರಣ ದಾಖಲಾಗಿದ್ದು, ಬೈಕ್‌ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರರು ಮೃತಪಟ್ಟಿದ್ದಾರೆ.
ಆನೇಕಲ್‌ನ ಅತ್ತಿಬೆಲೆ ಸಮೀಪ ಇಬ್ಬರು ಬೈಕ್‌ನಲ್ಲಿ ತೆರಳುವ ವೇಳೆ ಹಿಂಬದಿಯಿಂದ ಲಾರಿ ಬಂದು ಡಿಕ್ಕಿ ಹೊಡೆದಿದ್ದು, ಚಾಲಕ ಪರಾರಿಯಾಗಿದ್ದಾನೆ.
ಮಂಜಪ್ಪ ಹಾಗೂ ಬೈಕ್ ಚಾಲನೆ ಮಾಡುತ್ತಿದ್ದ ವ್ಯಕ್ತಿ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಚಾಲಕನ ಗುರುತು ಪತ್ತೆಯಾಗಿಲ್ಲ. ಅತ್ತಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.