ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಒಂದೇ ಕುಟುಂಬ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದಾಬಾಸ್ ಪೇಟೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿದೆ. ಈ ಪರಿಣಾಮ ಬೆಂಗಳೂರು ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.
ಮೃತರನ್ನು ಗೋಪಾಲ್, ಪತ್ನಿ ಶಶಿಕಲಾ ಹಾಗೂ ಮಗಳು ದೀಪಾ ಎಂಬುದಾಗಿ ಗುರುತಿಸಲಾಗಿದೆ. ಇನ್ನೂ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.