ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ಮೂರು ಕೆ ಎಸ್ ಆರ್ ಟಿ ಸಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಸುಮಾರು 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, 10 ಪ್ರಯಾಣಿಕರ ಸ್ಥಿತಿ ಗಂಭೀರವಾಗಿರುವ ಘಟನೆ ಸಂಭವಿಸಿದೆ.
ಮಳವಳ್ಳಿ ಮತ್ತು ಕೊಳ್ಳೇಗಾಲ ಹೆದ್ದಾರಿಯಲ್ಲಿ ಮೂರು ಸರ್ಕಾರಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಎರಡು ಕೆಎಸ್ಆರ್ಟಿಸಿ ಬಸ್ ಗಳ ನಡುವೆ ಡಿಕ್ಕಿಯಾಗಿತ್ತು. ಅಪಘಾತಕ್ಕೆ ಈಡಾಗಿದ್ದ ಬಸ್ಗೆ ಮತ್ತೊಂದು ಕೆ ಎಸ್ ಆರ್ ಟಿ ಸಿ ಬಸ್ ಬಂದು ಡಿಕ್ಕಿ ಹೊಡೆದಿದೆ. ಅಪಘಾತ ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.