ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದಲ್ಲಿ ಮತ್ತೋರ್ವ ಭಾರತೀಯ ವಿದ್ಯಾರ್ಥಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಈ ಮೂಲಕ ಇದು ಕಳೆದ ಒಂದು ವಾರದಲ್ಲಿ ನಡೆಯುತ್ತಿರುವ ಮೂರನೇ ಘಟನೆಯಾಗಿದೆ.
ಶ್ರೇಯಸ್ ರೆಡ್ಡಿ ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದು, ಇದಕ್ಕೂ ಮುನ್ನ ವಿವೇಕ್ ಸೈನಿ, ನೀಲ್ ಆಚಾರ್ಯ ಎಂಬ ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ಸಾವಿಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಈ ನಡುವೆ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ನ್ಯೂಯಾರ್ಕ್‌ನ ಭಾರತೀಯ ಕಾನ್ಸುಲೇಟ್, ದುರಂತದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಶ್ರೇಯಸ್ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದ್ದೇವೆ ಎಂದು ಹೇಳಿದೆ.