ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲು ಹಳಿ ಮೇಲೆ ಭೂಕುಸಿತ ಉಂಟಾಗಿದ್ದು, ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರ ಸ್ಥಗಿತಗೊಂಡಿದೆ.
ವಾರದ ಹಿಂದೆ ಇದೇ ಸ್ಥಳದಲ್ಲಿ ರೈಲು ಮಾರ್ಗದಲ್ಲಿ ಭೂಕುಸಿತ ಉಂಟಾಗಿತ್ತು. ಮಣ್ಣು ತೆರವು ಕಾರ್ಯ ಮುಗಿದು ರೈಲು ಸಂಚಾರ ಆರಂಭವಾದ ಬಳಿಕ ಮತ್ತೆ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಯಶವಂತಪುರ-ಕಾರವಾರ ಎಕ್ಸ್ಪ್ರೆಸ್ ರೈಲು ಕಳೆದ ಅರ್ಧ ಗಂಟೆಯಿಂದ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ನಿಂತಿದೆ.
ರೈಲು ನಿಲುಗಡೆಯಿಂದ ಪ್ರಯಾಣಿಕರು ಪರದಾಟ ಅನುಭವಿಸಿದ್ದಾರೆ. ಕೂಡಲೇ ಸ್ಥಳಕ್ಕೆ ರೈಲ್ವೆ ಇಲಾಖೆ ಅಧಿಕಾರಿಗಳು ಆಗಮಿಸಿದ್ದಾರೆ.