ಹೊಸ ದಿಗಂತ ಮಂಗಳೂರು:
ಬಿಸಿಲಿನ ಹೊಡೆತಕ್ಕೆ ಕಾಸರಗೋಡು ಜಿಲ್ಲೆಯಲ್ಲಿ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ.
ಹಾವೇರಿ ಜಿಲ್ಲೆಯ ಸಾವನ್ನೂರು ತಾಲೂಕಿನ ಶಿರಿಬಿದಿಗೆ ನಿವಾಸಿ, ಕಾರ್ಮಿಕ ವೃತ್ತಿ ನಡೆಸುತ್ತಿದ್ದ ರುದ್ರಪ್ಪ ಲಮಾಣಿ (45)ಮೃತಪಟ್ಟವರು.
ಇವರು ಕಾಸರಗೋಡಿನ ಜೆ.ಪಿ ಕಾಲನಿಯ ಕ್ವಾಟ್ರಸ್ ಒಂದರಲ್ಲಿ ವಾಸಿಸುತ್ತಿದ್ದರು. ಮನೆಯಿಂದ ಹೊರಬಂದಿದ್ದ ಇವರು ಕ್ವಾಟ್ರಸ್ ಪಕ್ಕದಲ್ಲಿಯೇ ರಸ್ತೆಬದಿ ಕುಸಿದುಬಿದ್ದಿದ್ದು, ತಕ್ಷಣ ಜನರಲ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು.
ಕಟ್ಟಡ ನಿರ್ಮಾಣ ಕಾರ್ಮಿಕರಾಗಿ ರುದ್ರಪ್ಪ ಲಮಾಣಿ ಕಳೆದ ಒಂಬತ್ತು ವರ್ಷಗಳಿಂದ ಕಾಸರಗೋಡಿನಲ್ಲಿ ವೃತ್ತಿ ನಿರ್ವಹಿಸುತ್ತಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಲಮಾಣಿ ಸಾವಿನೊಂದಿಗೆ ಕೇರಳದಲ್ಲಿ ಬಿಸಿಲಿನ ಆಘಾತಕ್ಕೆ ಬಲಿಯಾದವರ ಸಂಖ್ಯೆ ಮೂವಕ್ಕೆ ಏರಿಕೆಯಾಗಿದೆ