ಹೊಸ ದಿಗಂತ ವರದಿ,ಚಿತ್ರದುರ್ಗ
ನಿಂತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಹಾಗೂ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂರು ಜನ ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಸೀಬಾರ ಗ್ರಾಮದ ಬಳಿ ಬುಧವಾರ ಬೆಳಗ್ಗೆ ನಡೆದಿದೆ.
ಸೀಬಾರ ಬಳಿಯ ರಾಷ್ಟ್ರೀಯ ಹೆದ್ದಾರಿ ಸೇತುವೆ ಮೇಲೆ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ, ಅದರ ಬೆನ್ನಲ್ಲೇ ಮತ್ತೊಂದು ಟ್ರಕ್ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಬೆಂಗಳೂರಿನಿಂದ ದಾವಣಗೆರೆ ಕಡೆಗೆ ಲಾರಿಯಲ್ಲಿ ಕಲ್ಲಂಗಡಿ ಸಾಗಿಸಲಾಗುತ್ತಿತ್ತು. ಸ್ಥಳದಲ್ಲಿ ಇಬ್ಬರು ಮತ್ತು ಆಸ್ಪತ್ರೆಯಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ.
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಚಿತ್ರದುರ್ಗ ಡಿವೈಎಸ್‌ಪಿ ದಿನಕರ್ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.