ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಮತ್ತೊಂದು ಜೀವಬಲಿ ಪಡೆದಿದೆ.
ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದ್ವಿಚಕ್ರವಾಹನ ಹಾಗೂ ಬಿಎಂಟಿಸಿ ಬಸ್ ನಡುವಿನ ಅಪಘಾತದಲ್ಲಿ ವಿದ್ಯಾರ್ಥಿ ಗಂಗಾಧರ್ (21) ಸಾವನ್ನಪ್ಪಿದ್ದಾರೆ.
ಕಳೆದ ಹತ್ತು ದಿನಗಳ ಅವಧಿಯಲ್ಲಿ ಬಿಎಂಟಿಸಿ ಬಸ್ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಈಗ ಮೂರಕ್ಕೆ ಏರಿಕೆಯಾಗಿದೆ. ಸ್ಥಳಕ್ಕೆ ಯಶವಂತಪುರ ಸಂಚಾರ ಠಾಣಾ ಪೊಲೀಸರು ಧಾವಿಸಿದ್ದು, ಘಟನೆಯ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.