ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಬಹಳಷ್ಟು ನಾಟಕೀಯ ಬೆಳವಣಿಗೆ ಬಳಿಕ ಎನ್‌ಡಿಎ ಅಭ್ಯರ್ಥಿ ಯಾರು ಎಂಬುದಕ್ಕೆ ಗುರುವಾರ ಸ್ಪಷ್ಟತೆಗಳ ಸಿಕ್ಕಿತ್ತು. ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯವರು ಕಣಕ್ಕಿಳಿಯುತ್ತಿದ್ದಾರೆ. ಈ ಮೂಲಕ ಚನ್ನಪಟ್ಟಣ ಉಪಚುನಾವಣೆ ಅಖಾಡ ಹೈವೋಲ್ಟೇಜ್ ಪಡೆದುಕೊಂಡಿದೆ.
ಬಿಜೆಪಿ ತೊರೆದು ಕಾಂಗ್ರೆಸ್ನಿಂದ ಕಣಕ್ಕಿಳಿದಿರುವ ಸೈನಿಕನ ವಿರುದ್ಧ ಬಿಜೆಪಿ ಜೆಡಿಎಸ್ ದೋಸ್ತಿ ಪಡೆ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕೆ ಇಳಿಸಿದೆ.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ವಿರುದ್ಧ ನಿಖಿಲ್ ಎದುರಾಳಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರ ವಿರುದ್ಧ ಸ್ಪರ್ಧಿಸಿದ ಚುನಾವಣೆ ಅಂತೆಯೇ ಚನ್ನಪಟ್ಟಣ ಉಪಚುನಾವಣೆ ಕೂಡ ಹೈವೋಲ್ಟೇಜ್ ಕದನವಾಗಿ ಮಾರ್ಪಟ್ಟಿದೆ.
ಚನ್ನಪಟ್ಟಣ ಉಪಚುನಾವಣೆ ರಾಜಕೀಯದಲ್ಲಿ ಎಲ್ಲವೂ ನಿರೀಕ್ಷೆಯಂತೆ ನಡೆದಿದೆ. ಸಾಕಷ್ಟು ಹೈಡ್ರಾಮಾ, ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳ ನಡುವೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಶುಕ್ರವಾರ ಕೊನೆಯ ದಿನವಾಗಿದ್ದು, ಇದರಂತೆ ಇಂದು ನಿಖಿಲ್ ಕುಮಾರಸ್ವಾಮಿಯವರು ಬಿಜೆಪಿ-ಜೆಡಿಎಸ್ ನಾಯಕರ ಜೊತೆಗೂಡಿ ನಾಮಪತ್ರ ಸಲ್ಲಿಸಲಿದ್ದಾರೆ.