ಭಾರತದ ಮಡಿಲಿಗೆ ಮತ್ತೊಂದು ಪದಕ: ಪ್ಯಾರಿಸ್‌ನಲ್ಲಿ ಕಂಚು ಗೆದ್ದ ಹಾಕಿ ತಂಡ!

ಹೊಸದಿಗಂತ ಡಿಜಿಟಲ್ ಡೆಸ್ಕ್; 

ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಒದಗಿ ಬಂದಿದ . ಹರ್ಮನ್​ಪ್ರೀತ್ ಸಿಂಗ್ ನೇತೃತ್ವದ ಭಾರತ ತಂಡ ಹಾಕಿಯಲ್ಲಿ ಕಂಚಿನ ಪದಕ ಗೆದ್ದಿದೆ.

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಗೆದ್ದ ಕಂಚಿನ ಪದಕವನ್ನು ಉಳಿಸಿಕೊಳ್ಳುವಲ್ಲಿ ಭಾರತ ಪುರುಷರ ಹಾಕಿ ತಂಡ ಯಶಸ್ವಿಯಾಗಿದೆ. ಗುರುವಾರ ನಡೆದ ಕಂಚಿನ ಪದಕದ ಪಂದ್ಯದಲ್ಲಿ ಹರ್ಮನ್‌ಪ್ರೀತ್‌ ಸಿಂಗ್‌ ಸಾರಥ್ಯದ ಭಾರತ ತಂಡ 2-1 ಗೋಲುಗಳಿಂದ ಸ್ಪೇನ್‌ ತಂಡವನ್ನು ಸೋಲಿಸಿ ಕಂಚಿನ ಪದಕ ಜಯಿಸಿತು. ಆ ಮೂಲಕ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ನಾಲ್ಕನೇ ಕಂಚಿನ ಪದಕ ಇದಾಗಿದ್ದು, ಟೀಮ್‌ ಇವೆಂಟ್‌ನಲ್ಲಿ ಗೆದ್ದ 2ನೇ ಪದಕವಾಗಿದೆ.

ಒಲಿಂಪಿಕ್ಸ್ ಉದ್ದಕ್ಕೂ ಭಾರತಕ್ಕೆ ಗೆಲುವಿನಲ್ಲಿ ನೆರವಾಗಿದ್ದು ಗೋಲ್ ಕೀಪರ್​ ಶ್ರೀಜೇಶ್​. ಹೀಗಾಗಿ ಈ ಪದಕದೊಂದಿಗೆ ಅವರಿಗೆ ಉತ್ತಮ ವಿದಾಯ ದೊರಕಿದೆ. ಒಲಿಂಪಿಕ್ಸ್​ ಆರಂಭಕ್ಕೆ ಮುನ್ನವೇ ಅವರು ಇದು ನನಗೆ ಕೊನೇ ಅಂತಾರಾಷ್ಟ್ರೀಯ ಟೂರ್ನಿ ಎಂದು ಹೇಳಿದ್ದರು. ಹೀಗಾಗಿ ಅವರು ಇಲ್ಲಿಗೆ ತಮ್ಮ ವೃತ್ತಿ ಕ್ರೀಡೆಯನ್ನು ಮುಗಿಸಲಿದ್ದಾರೆ. ಹೀಗಾಗಿ ತಂಡದ ಆಟಗಾರರು ಉತ್ತಮ ವಿದದಾಯ ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!