ಕಾಮನ್‌ವೆಲ್ತ್ ನಲ್ಲಿ ಮತ್ತೊಂದು ಪದಕ ಖಚಿತ: ಫೈನಲ್ ಗೆ ಲಗ್ಗೆ ಇಟ್ಟ ಟೀಮ್ ಇಂಡಿಯಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾಮನ್‌ವೆಲ್ತ್ ಗೇಮ್ಸ್ ಮಹಿಳಾ ಕ್ರಿಕೆಟ್ ವಿಭಾಗದ ಸೆಮಿಫೈನಲ್ ಮೊದಲ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಈ ಮೂಲಕ ಪದಕದ ಅಸೆ ಜೀವಂತಾಗಿಸಿದೆ.
ಇಂಗ್ಲೆಂಡ್ ತಂಡವನ್ನು ನಾಲ್ಕು ರನ್‌ಗಳಿಂದ ಸೋಲಿಸಿದ ಭಾರತ ಫೈನಲ್‌ಗೆ ತಲುಪಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 164 ರನ್ ಗಳಿಸಿ ಇಂಗ್ಲೆಂಡ್ ಗೆಲುವಿಗೆ 165 ಟಾರ್ಗೆಟ್ ನೀಡಿದ್ದರು.
165 ರನ್‌ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 160 ರನ್‌ ಗಳಿಸಲು ಸಶಕ್ತವಾಯಿತು. ಈ ಮೂಲಕ ಭಾರತ ಗೆಲುವಿನ ನಗೆ ಬೀರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!