ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಮೆಟ್ರೋ ದುರಂತ ಸಂಭವಿಸಿದ್ದು, ಕಾಮಗಾರಿಗೆ ಬಳಕೆ ಮಾಡುತ್ತಿದ್ದ ಕ್ರೇನ್ ಕೆಳಗೆ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.
ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಮೆಟ್ರೋ ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್ ನೆಲಕ್ಕುರುಳಿದೆ. ಸಿಲ್ಕ್ ಬೋರ್ಡ್‌ನಿಂದ ಮಡಿವಾಳಕ್ಕೆ ಸಂಪರ್ಕಿಸುವ ಮಾರ್ಗದಲ್ಲಿ ದುರ್ಘಟನೆ ನಡೆದಿದ್ದು, ಕೂದಲೆಳೆಯಲ್ಲಿ ಜನರು ಪಾರಾಗಿದ್ದಾರೆ. ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.