ಕೊರೋನಾ ಲಸಿಕೆ ನೀಡುವಲ್ಲಿ ಮತ್ತೊಂದು ಮೈಲುಗಲ್ಲು: 210 ಕೋಟಿಗೂ ಅಧಿಕ ಡೋಸ್ ವಿತರಣೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದಲ್ಲಿ ಕೊರೋನಾ ಲಸಿಕೆ ನೀಡುವಲ್ಲಿ ಸಾಧನೆಯಾಗಿದ್ದು, ಸೋಮವಾರ 210 ಕೋಟಿಗೂ ಅಧಿಕ ಡೋಸ್ ಕೋವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ 35 ಲಕ್ಷಕ್ಕೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಮನ್ಸುಖ್ ಮಾಂಡವೀಯಾ, ವಿಶ್ವದ ಅತ್ಯಂತ ದೊಡ್ಡದಾದ ಲಸಿಕಾ ಅಭಿಯಾನದಲ್ಲಿ ಕೊನೆ ಇಲ್ಲದಾಗಿದೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಹೆಚ್ಚಿನ ಕೋವಿಡ್-19 ಲಸಿಕೆ ನೀಡಲಾಗಿದೆ ಎಂದು ಅವರು ಟ್ವೀಟರ್ ನಲ್ಲಿ ತಿಳಿಸಿದ್ದಾರೆ.
ಲಸಿಕೆ ಪಡೆದ ನಂತರವೂ ಕೋವಿಡ್ ಶಿಷ್ಟಾಚಾರ, ನಿಯಮಗಳನ್ನು ಪಾಲಿಸುವಂತೆ ಸಚಿವರು ಸಲಹೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!