ಬಂಗಾಳದಲ್ಲಿ ಮತ್ತೊಂದು ದುಷ್ಕೃತ್ಯ: ಕರ್ತವ್ಯದಲ್ಲಿದ್ದ ನರ್ಸ್ ಗೆ ಕಿರುಕುಳ ಕೊಟ್ಟ ರೋಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಪಶ್ಚಿಮ ಬಂಗಾಳದ ಆಸ್ಪತ್ರೆಯೊಂದರಲ್ಲಿ ಕರ್ತವ್ಯದಲ್ಲಿದ್ದ ನರ್ಸ್ ಗೆ ರೋಗಿಯೊಬ್ಬ ಖಾಸಗಿ ಅಂಗ ಸ್ಪರ್ಶಿಸಿ ಕಿರುಕುಳ ನೀಡಿರುವ ಘಟನೆ ನಡೆದಿದೆ.

ಆರ್.ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ ಟ್ರೈನಿ ವೈದ್ಯೆ ಅತ್ಯಾಚಾರ ಪ್ರಕರಣದ ತನಿಖೆ ಪ್ರಗತಿಯಲ್ಲಿರುವಾಗಲೇ ಬಂಗಾಳದ ಬಿರ್ಭಮ್‌ನ ಇಲಂಬಜರ್ ಆರೋಗ್ಯ ಕೇಂದ್ರದಲ್ಲಿ ಘಟನೆ ನಡೆಸಿದೆ.

ನರ್ಸ್ ಚಿಕಿತ್ಸೆ ನೀಡುತ್ತಿದ್ದ ವೇಳೆ ರೋಗಿಯೊಬ್ಬ ಕಿರುಕುಳ ನೀಡಿದ್ದಾನೆ.

ವೈದ್ಯರ ಸೂಚನೆಯಂತೆ ನಾನು ಚಿಕಿತ್ಸೆ ನೀಡುತ್ತಿದೆ. ಈ ವೇಳೆ ರೋಗಿಯು ನನ್ನೊಂದಿಗೆ ಅನುಚಿತವಾಗಿ ವರ್ತಿಸತೊಡಗಿದ, ನನ್ನ ಖಾಸಗಿ ಅಂಗಗಳನ್ನು ಮುಟ್ಟಿ ಕಿರುಕುಳ ನೀಡುವ ಜೊತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಂದು ನರ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ಕೃತ್ಯವೆಸಗುವ ವೇಳೆ ರೋಗಿಯ ಕುಟುಂಬಸ್ಥರು ಜೊತೆಗೆ ಇದ್ದರು ಎಂದು ಆರೋಪಿಸಿದ್ದಾರೆ.

ಈಗಾಗಲೇ ಟ್ರೈನಿ ವೈದ್ಯೆಯ ಅತ್ಯಾಚಾರ ಪ್ರಕರಣದ ನಂತರ ಈ ಘಟನೆಯು ಜನರಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ಇದರ ನಡುವೆ ಬಂಗಾಳದಲ್ಲಿ ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು, ಸರಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!