ಕೇರಳದಲ್ಲಿ ಮತ್ತೊಂದು ಮಂಕಿಪಾಕ್ಸ್‌ ಪ್ರಕರಣ ಪತ್ತೆ: ದೇಶದಲ್ಲಿ ಮೂರನೇ ಕೇಸ್ ದೃಢ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇರಳದಲ್ಲಿ ಮತ್ತೆ ಮೂರನೇ ಮಂಕಿಪಾಕ್ಸ್ ಪ್ರಕರಣ ದಾಖಲಾಗಿದ್ದು, ಈ ಮೂಲಕ ದೇಶದಲ್ಲಿ ಮೂರು ಪ್ರಕರಣಗಳು ವರದಿಯಾಗಿವೆ.
ಜುಲೈ 13 ರಂದು ಜ್ವರದಿಂದ ಮಂಜೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾದ ಅವರು 15 ನೇ ತಾರೀಖಿನಿಂದ ರೋಗಲಕ್ಷಣಗಳನ್ನು ಕಾಣಲಾರಂಭಿಸಿದೆ.
ಅವರ ಕುಟುಂಬ ಮತ್ತು ನಿಕಟ ಸಂಪರ್ಕಿತರು ನಿಗಾದಲ್ಲಿದ್ದಾರೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ.
ಈ ತಿಂಗಳ ಆರಂಭದಲ್ಲಿ ಯುಎಇಯಿಂದ ಕೇರಳಕ್ಕೆ ಆಗಮಿಸಿದ 35 ವರ್ಷದ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ದೃಢಪಟ್ಟಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಜುಲೈ 6ರಂದು ಯುಎಇಯಿಂದ ರಾಜ್ಯಕ್ಕೆ ಆಗಮಿಸಿದ ಮಲಪ್ಪುರಂ ಮೂಲದ ವ್ಯಕ್ತಿಗೆ ಮಂಕಿಪಾಕ್ಸ್ ಪಾಸಿಟಿವ್ ದೃಢಪಟ್ಟಿದ್ದು, ಅವರು ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ತಿಳಿಸಿದ್ದಾರೆ.
ಮಂಕಿಪಾಕ್ಸ್ ಸೋಂಕಿತ ವ್ಯಕ್ತಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ರೋಗಿಯೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಎಲ್ಲರನ್ನೂ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!