Sunday, September 25, 2022

Latest Posts

ದೆಹಲಿಯಲ್ಲಿ ಮತ್ತೊಂದು ಮಂಕಿಪಾಕ್ಸ್ ಪತ್ತೆ: ಭಾರತದಲ್ಲಿ ಪ್ರಕರಣ ಸಂಖ್ಯೆ 10ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತದಲ್ಲಿ ಮಂಕಿಪಾಕ್ಸ್ ಪ್ರಕರಣ ಏರಿಕೆ ಕಾಣುತ್ತಿದೆ. ದೆಹಲಿಯಲ್ಲಿ ಮತ್ತೊಂದು ಪ್ರಕರಣ ಪತ್ತೆಯಾಗಿದೆ.

22 ಹರೆಯದ ಯುವತಿಯಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಲೋಕ ನಾಯಕ ಜಯಪ್ರಕಾಶ್ ನಾರಾಯಣ ಆಸ್ಪತ್ರೆಗೆ ದಾಖಲಾದ ಯುವತಿಯ ಮಾದರಿಯನ್ನು ಪರೀಕ್ಷಿಸಲಾಗಿತ್ತು. ಇದೀಗ ಯುವತಿಗೆ ಮಂಕಿಪಾಕ್ಸ್ ವೈರಸ್ ತಗುಲಿರುವುದು ಖಚಿತಗೊಂಡಿದೆ.

ಆಗಸ್ಟ್ 12 ರಂದು ವರದಿ ಬಂದಿದ್ದು, ಮಂಕಿಪಾಕ್ಸ್ ಪಾಸಿಟೀವ್ ಬಂದಿದೆ. ಸೋಂಕಿತೆ ಮೇಲೆ ವೈದ್ಯರ ತಂಡ ನಿಘಾ ವಹಿಸಿದೆ ಎಂದು ಲೋಕನಾಯಕ ಜಯಪ್ರಕಾಶ ನಾರಾಯಣ ಆಸ್ಪತ್ರೆ ಹೇಳಿದೆ.

ಮಂಕಿಪಾಕ್ಸ್ ಸೋಂಕು ಪತ್ತೆಯಾದ ಯುವತಿ ಕಳೆದ ಒಂದು ತಿಂಗಳಿನಿಂದ ಪ್ರಯಾಣ ಮಾಡಿಲ್ಲ. ವಿದೇಶ ಪ್ರಯಾಣದ ಇತಿಹಾಸ ಹೊಂದಿಲ್ಲ. ಹೀಗಾಗಿ ಈಕೆಗೆ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದ್ದು ಹೇಗೆ ಅನ್ನೋ ಕುರಿತು ಅಧ್ಯಯನ ನಡೆಯುತ್ತಿದೆ. 22ರ ಯುವತಿ ಪ್ರಕರಣದಿಂದ ದೆಹಲಿಯಲ್ಲಿ ಮಂಕಿಪಾಕ್ಸ್ ಪ್ರಕರಣ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಇಷ್ಟೇ ಅಲ್ಲ ಭಾರತದಲ್ಲಿ ಮಂಕಿಪಾಕ್ಸ್ ಪ್ರಕರಣ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!