ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿಪ್ಪಗೊಂಡನಹಳ್ಳಿ ಜಲಾಶಯದ ಬಳಿ ಕಾರಿನಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಚಾಲನಕನೊಬ್ಬನ ಮೃತದೇಹ ಬುಧವಾರ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಮಾಗಡಿ ಸಮೀಪದ ಕಲ್ಲು ದೇವನಹಳ್ಳಿ ಮೂಲದ ಅಂಬರೀಶ್ (30) ಎಂದು ಗುರುತಿಸಲಾಗಿದ್ದು, ನಗರದ ಕೊಡಿಗೇಹಳ್ಳಿ ನಿವಾಸಿಯಾಗಿದ್ದ ಎಂದು ತಿಳಿದುಬಂದಿದೆ. ಶನಿವಾರವೇ ಅಂಬರೀಷ್ ಅವರನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮೃತ ಅಂಬರೀಷ್ ವಿವಾಹಿತ ಮಹಿಳೆಯೊಬ್ಬರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ಇದೇ ಹತ್ಯೆಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ಮಹಿಳೆಯ ಪತಿ ಅಂಬರೀಷ್ ಅವರನ್ನು ಹತ್ಯೆ ಮಾಡಿದ್ದಾರೆಂದು ಹೇಳಲಾಗುತ್ತಿದೆ.