ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, 17 ವರ್ಷದ ಯುವಕನನ್ನು ಹತ್ಯೆ ಮಾಡಲಾಗಿದೆ. 17 ವರ್ಷದ ಮಂಜುನಾಥ್ ಎಂಬ ಯುವಕನ ಭೀಕರ ಹತ್ಯೆ ನಡೆದಿದ್ದು, ತಲೆಗೆ ರಾಡ್‌ನಿಂದ ಹಲ್ಲೆ ಮಾಡಿ ಕೊಲ್ಲಲಾಗಿದೆ.
ವರ್ಷಗಳ ಹಿಂದೆ ಅಪ್ಪ ಅಮ್ಮನನ್ನ ಕಳ್ಕೊಂಡು ಅಬ್ಬಿಗೆರೆಯಲ್ಲಿ ಚಿಕ್ಕಪ್ಪನ ಆಶ್ರಯದಲ್ಲಿದ್ದ ಮಂಜುನಾಥ್, ಈ ವರ್ಷವಷ್ಟೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಫೇಲ್ ಆಗಿದ್ದ. ಆದರೆ ಮೊನ್ನೆ ರಾತ್ರಿ ಮನೆಯಿಂದ ಹೊರ ಹೋಗಿದ್ದ ಮಂಜುನಾಥ್ ಮತ್ತೆ ವಾಪಾಸ್ ಬರಲೇ ಇಲ್ಲ.
ಮಂಜುನಾಥ್ ಮದ್ಯ ಹಾಗೂ ಗಾಂಜಾ ಸೇವನೆ ಮಾಡುತ್ತಿದ್ದ, ಆತನನ್ನು ಮನೆಗೆ ಕರೆದುಕೊಂಡು ಬಂದು ಮಲಗಿಸಿದ್ದೆವು. ಆದರೆ ಮಧ್ಯರಾತ್ರಿ ಎದ್ದುಹೋಗಿದ್ದಾನೆ. ಎಷ್ಟು ಹೊತ್ತಾದರೂ ಬಾರದೇ ಇದ್ದಾಗ ಆತನನ್ನು ಹುಡುಕಿದೆವು YMRAC ಸರ್ಕಲ್ ಬಳಿಯ ಖಾಲಿ ಜಾಗದಲ್ಲಿ ಮಂಜುನಾಥ್ ಮೃತದೇಹ ಸಿಕ್ಕಿದೆ ಎಂದು ಮನೆಯವರು ಮಾಹಿತಿ ನೀಡಿದ್ದಾರೆ.
17 ವರ್ಷದ ಮಂಜುನಾಥ್‌ಗೆ ಪ್ರಿಯತಮೆಯೂ ಇದ್ದಳು ಎಂದು ಹೇಳಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿರಬಹುದು ಎನ್ನಲಾಗಿದೆ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.