ಕೇರಳದಲ್ಲಿ ಮತ್ತೊಂದು ನಿಫಾ ವೈರಸ್ ಪ್ರಕರಣ ದೃಢ, ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದಲ್ಲಿ ಮತ್ತೊಂದು ನಿಫಾ ವೈರಸ್ ಪ್ರಕರಣ ದೃಢವಾಗಿದ್ದು, ಇದೀಗ ಪ್ರಕರಣಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಕೋಯಿಕ್ಕೋಡ್‌ನ ಆಸ್ಪತ್ರೆಯಲ್ಲಿ ಸೋಂಕಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಫಾ ಸೋಂಕು ತಗುಲಿ ಈಗಾಗಲೇ ಇಬ್ಬರು ಮೃತಪಟ್ಟಿದ್ದಾರೆ.

ಒಂಬತ್ತು ವರ್ಷದ ಬಾಲಕನಿಗೂ ನಿಫಾ ಸೋಂಕು ತಗುಲಿದ್ದು, ಆತನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.
ಬಾಂಗ್ಲಾದೇಶದ ರೂಪಾಂತರಿ ಸೋಂಕು ಇದಾಗಿದ್ದು, ತಗುಲುವ ವೇಗ ಕಡಿಮೆ ಇದೆ. ಆದರೆ ಮರಣ ಪ್ರಮಾಣ ಹೆಚ್ಚಾಗಿದ್ದು, ಕೋಯಿಕ್ಕೋಡ್‌ನಲ್ಲಿ 11 ವಾರ್ಡ್‌ಗಳನ್ನು ಕಂಟೇನ್ಮೆಂಟ್ ವಲಯ ಎಂದು ಘೋಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!