Wednesday, December 17, 2025

ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಇಲ್ಲಿನ ಸರಗೂರು ತಾಲೂಕಿನ ಕುರ್ಣೇಗಾಲ ಬಳಿ ಕಾಡಂಚಿನ ಜಮೀನಿನಲ್ಲಿ ಹಸು ಮೇಯಿಸುತ್ತಿದ್ದ ವೇಳೆ ಹುಲಿ ದಾಳಿ ನಡೆಸಿದ್ದು, ಮೃತ ವ್ಯಕ್ತಿಯನ್ನು ನಿಂಗಯ್ಯ(65) ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ಹುಲಿ ದಾಳಿಯಿಂದ ರೈತ ರಾಜಶೇಖರ್​ ಅವರು ಇತ್ತೀಚೆಗಷ್ಟೇ ಮೃತ ಪಟ್ಟಿದ್ದರು. ಘಟನೆ ಮಾಸುವ ಮುನ್ನವೇ ಮತ್ತೊಂದು ಅವಘಡ ನಡೆದಿದೆ.

error: Content is protected !!