ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡುವ ವಿಚಾರವಾಗಿ ಬೆಂಗಳೂರು ಜಲ ಮಂಡಳಿ ಬಿಗ್ ಅಪ್ಡೇಟ್ ನೀಡಿದೆ, ಡೊಮೆಸ್ಟಿಕ್ ಕನೆಕ್ಷನ್ಗೆ ಗರಿಷ್ಠ ಲೀಟರ್ಗೆ ಒಂದು ಪೈಸೆ ಹೆಚ್ಚಳವಾಗಲಿದೆ.
ನೀರಿನ ದರ ಹೆಚ್ಚಳ ಅನಿವಾರ್ಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕೂಡ ಹಲವು ಬಾರಿ ಹೇಳಿದ್ದರು. ಇದೀಗ ಜಲಮಂಡಳಿ ಅಧ್ಯಕ್ಷರು ನೀರಿನ ದರ ಏರಿಕೆ ಬಗ್ಗೆ ಮಾಹಿತಿ ನೀಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ 1ರಿಂದ ಶೇಕಡಾ 3ರಷ್ಟು ನೀರಿನ ದರ ಹೆಚ್ಚಳವಾಗಲಿದೆ. ಇದೀಗ ಸದ್ಯದ ತೀರ್ಮಾನದಿಂದಾಗಿ ಗೃಹ ಬಳಕೆದಾರರಿಗೆ ತಿಂಗಳಿಗೆ 20-30 ರೂ. ಹೆಚ್ಚುವರಿ ಹೊರೆಯಾಗಬಹುದು. ವಾಣಿಜ್ಯ ಬಳಕೆದಾರರಿಗೆ ಪ್ರತಿ ತಿಂಗಳು 50-60 ರೂ. ಹೊರೆಯಾಗಬಹುದು ಎಂದು ಹೇಳಿದ್ದಾರೆ.
ಈಗಾಗಲೇ ಹಾಲು, ಮೊಸರು ಇನ್ನಿತರ ಅಗತ್ಯ ವಸ್ತುಗಳ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನರಿಗೆ ಇನ್ನಷ್ಟು ಹೊರೆ ಬಿಳೋದಂತೂ ಪಕ್ಕಾ.