September 10, 2026
Thursday, September 10, 2026
spot_img

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ: ಶಾಲಾ ವಾಹನಗಳ ಶುಲ್ಕವೂ ಹೆಚ್ಚಳ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಈಗಾಗಲೇ ಪೆಟ್ರೋಲ್, ಡೀಸೆಲ್ ಹಾಗೂ ದಿನನಿತ್ಯದ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಇದೀಗ ಮತ್ತೊಂದು ಬಿಸಿ ತಟ್ಟಿದ್ದು, ಖಾಸಗಿ ಶಾಲಾ ವ್ಯಾನ್ ಮತ್ತು ಬಸ್ ಪ್ರಯಾಣ ದರವನ್ನು ಶೇಕಡಾ 10 ರಿಂದ 15 ರಷ್ಟು ಹೆಚ್ಚಿಸಲು ಮಾಲೀಕರ ಸಂಘಟನೆಗಳು ನಿರ್ಧರಿಸಿವೆ.

ಖಾಸಗಿ ಶಾಲೆಗಳ ಶುಲ್ಕ ಹೆಚ್ಚಳ

ಒಂದೆಡೆ ಈ ವರ್ಷ ಖಾಸಗಿ ಶಾಲೆಗಳು ಶೇ.10ರಷ್ಟು ಶುಲ್ಕವನ್ನು ಹೆಚ್ಚಳ ಮಾಡಿದ್ದು, ಈ ಬೆನ್ನಲ್ಲೇ ಇದೀಗ ಖಾಸಗಿ ಶಾಲಾ ಬಸ್ ಮತ್ತು ವ್ಯಾನ್ ದರ ಏರಿಕೆಗೆ ಮುಂದಾಗಿದ್ದು, ಪೋಷಕರಿಗೆ ದೊಡ್ಡ ಹೊರೆಯಾಗಿ ಪರಿಣಮಿಸಲಿದೆ.

ಇಂಧನ ದರಗಳ ಏರಿಕೆ

ಇಂಧನ ದರಗಳ ಏರಿಕೆಯಿಂದಾಗಿ ದೈನಂದಿನ ನಿರ್ವಹಣಾ ವೆಚ್ಚ ಕೂಡ ಹೆಚ್ಚುತ್ತಿದ್ದು, ಹೀಗಾಗಿ ಅನಿವಾರ್ಯವಾಗಿ ಶೇ. 10 ರಿಂದ ಶೇ. 15 ರಷ್ಟು ದರ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಮಾಲೀಕರು ತಿಳಿಸಿದ್ದಾರೆ.

20,000ಕ್ಕೂ ಹೆಚ್ಚು ಶಾಲಾ ವಾಹನಗಳು

ಪ್ರಸ್ತುತ ರಾಜ್ಯಾದ್ಯಂತ ಸುಮಾರು 20,000ಕ್ಕೂ ಹೆಚ್ಚು ನೋಂದಾಯಿತ ಖಾಸಗಿ ಶಾಲಾ ವಾಹನಗಳು ಇದ್ದು, ರಾಜ್ಯದ ಪ್ರಮುಖ ನಗರಗಳಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪ್ರತಿದಿನ ಖಾಸಗಿ ಬಸ್ ಹಾಗೂ ವ್ಯಾನ್‌ಗಳನ್ನೇ ಅವಲಂಬಿಸಿದ್ದಾರೆ. ಹೀಗಾಗಿ ದರ ಏರಿಕೆ ಮಧ್ಯಮ ವರ್ಗದ ಪೋಷಕರಿಗೆ ದೊಡ್ಡ ಹೊರೆಯಾಗಿ ಪರಿಣಮಿಸಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !