July 8, 2026
Wednesday, July 8, 2026
spot_img

ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಗಣನೀಯ ಏರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನಸಾಮಾನ್ಯರು ಹಾಗೂ ಉದ್ಯಮಿಗಳಿಗೆ ಕೇಂದ್ರ ಸರ್ಕಾರ ಮತ್ತೊಂದು ದೊಡ್ಡ ಶಾಕ್ ನೀಡಿದೆ. 19 ಕೆಜಿ ತೂಕದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರವನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಳ ಮಾಡಲಾಗಿದ್ದು, ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ.

ಆದರೆ, ಸಾರ್ವಜನಿಕರಿಗೆ ಸಮಾಧಾನಕರ ಸಂಗತಿಯೆಂದರೆ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಪ್ರಮುಖ ನಗರಗಳಲ್ಲಿ ಇಂದಿನ ಕಮರ್ಷಿಯಲ್ ಸಿಲಿಂಡರ್ ದರಗಳು:

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ₹46 ಹೆಚ್ಚಳವಾಗಿದ್ದು, ಪ್ರಸ್ತುತ ದರ ₹3,198 ಕ್ಕೆ ತಲುಪಿದೆ.

ದೆಹಲಿ: ದೇಶದ ರಾಜಧಾನಿಯಲ್ಲಿ ₹42 ಏರಿಕೆಯಾಗುವುದರೊಂದಿಗೆ ಪ್ರತಿ ಸಿಲಿಂಡರ್ ಬೆಲೆ ₹3,113.5 ಆಗಿದೆ.

ಕೋಲ್ಕತ್ತಾ: ಇಲ್ಲಿ ಅತ್ಯಧಿಕ ಅಂದರೆ ₹53.5 ಹೆಚ್ಚಳವಾಗಿದ್ದು, ಹೊಸ ದರ ₹3,255.5 ಕ್ಕೆ ಏರಿದೆ.

5 ಕೆಜಿ ಎಫ್‌ಟಿಎಲ್ ಸಿಲಿಂಡರ್ ದರವೂ ದುಬಾರಿ:

ವಾಣಿಜ್ಯ ಸಿಲಿಂಡರ್ ಮಾತ್ರವಲ್ಲದೆ, 5 ಕೆಜಿಯ ಫ್ರೀ ಟ್ರೇಡ್ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನೂ ಸಹ ₹11 ರಷ್ಟು ಹೆಚ್ಚಿಸಲಾಗಿದೆ. ಈ ಹೆಚ್ಚಳದ ಬಳಿಕ ಇದರ ಒಟ್ಟು ಬೆಲೆ ₹821.5 ಕ್ಕೆ ತಲುಪಿದೆ. ಈ ದಿಢೀರ್ ದರ ಏರಿಕೆಯು ಹೋಟೆಲ್, ರೆಸ್ಟೋರೆಂಟ್ ಮತ್ತು ಸಣ್ಣ ವ್ಯಾಪಾರಿಗಳ ಬಜೆಟ್ ಮೇಲೆ ನೇರ ಪರಿಣಾಮ ಬೀರಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !