Thursday, February 2, 2023

Latest Posts

ಬೆಂಗಳೂರಿನ ಮತ್ತೊಂದು ಖಾಸಗಿ ಶಾಲೆಗೆ ಬಂತು ಬಾಂಬ್ ಬೆದರಿಕೆ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ರಾಜಧಾನಿ ಬೆಂಗಳೂರಿನ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದೆ.

ಇದರಿಂದ ಶಿಕ್ಷಕರು, ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿಗಳು ಆತಂಕಕ್ಕೀಡಾಗಿದ್ದರೆ.

ಬೆಂಗಳೂರಿನ ರಾಜಾಜಿನಗರದಲ್ಲಿರುವ NAFL ಶಾಲೆಗೆ ಬಾಂಬ್ ಇಡಲಾಗಿದೆ ಎಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಇ ಮೇಲ್ ಕಳುಹಿಸಲಾಗಿದೆ.ಶಾಲಾ ಆವರಣದಲ್ಲಿ 4 ಜಿಲೆಟಿನ್ ಕಡ್ಡಿಗಳನ್ನು ಇಡಲಾಗಿದೆ ಎಂದು ಮೇಲ್ ನಲ್ಲಿ ಉಲ್ಲೇಖಿಸಲಾಗಿದೆ.

ತಕ್ಷಣ ಶಾಲೆಯ ಆಡಳಿತ ಮಂಡಳಿ ಬಸವೇಶ್ವರ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಧಾವಿಸಿದ ಪೊಲೀಸರು ಮಕ್ಕಳನ್ನು ಹಾಗೂ ಶಿಕ್ಷಕರನ್ನು ಶಾಲೆಯಿಂದ ಸುರಕ್ಷಿತ ಸ್ಥಳಕ್ಕೆ ಕಳುಹಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!