ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಆರ್ ಎಸ್ ಎಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಾಗಿದೆ.
ಕಿರಣ್ ಎಸ್ ಎಂಬುವರು ಸಿಎಂ ಸಿದ್ಧರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಎನ್ಎಸ್ ಕಾಯ್ದೆಯ ಸೆಕ್ಷನ್ 299, 352, 356 (2) ರಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ.