ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಬಿಎಂಪಿ ಗುತ್ತಿಗೆದಾರ ಚಲುವಾರಜುಗೆ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದ ತನಿಖೆಗೆ ಸಕ್ಷಮ ಪ್ರಾಧಿಕಾರ ಅನುಮತಿ ನೀಡಿದೆ.
ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988 ರ ಅಡಿ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಎಲ್ಎ ಮುನಿರತ್ನ ವಿರುದ್ಧ ತನಿಖೆಗೆ ಸಿಐಡಿ ಪೋಲಿಸ್ ಮಹಾ ನಿರ್ದೇಶಕರು ಸಕ್ಷಮ ಪ್ರಾಧಿಕಾರಕ್ಕೆ ಅನುಮತಿ ಕೋರಿದ್ದರು. ಸಕ್ಷಮ ಪ್ರಾಧಿಕಾರ ತನಿಖೆಗೆ ಅನುಮತಿ ನೀಡಿದೆ. ಇದರಿಂದ ಶಾಸಕ ಮುನಿರತ್ನಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.