ದರ್ಶನ್ ಗ್ಯಾಂಗ್​ಗೆ ಮತ್ತೊಂದು ಸಂಕಷ್ಟ: ಮಾಸ್ಟರ್​​ ಪ್ಲ್ಯಾನ್​ ಮಾಡಿದ ಪೊಲೀಸರು

ಹೊಸದಿಗಂತ ಡಿಜಿಟಲ್ ಡೆಸ್ಕ್: 

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಪೂರ್ತಿಗೊಳಿಸಿದ್ದು, ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ. ಚಾರ್ಜ್​ಶೀಟ್​ ಸಲ್ಲಿಕೆಯಾದ ಮೇಲೆ ಅನೇಕ ಸತ್ಯಗಳು, ಹುದುಗಿದ್ದ ಅನೇಕ ಕರಾಳ ಅಧ್ಯಾಯಗಳು ಹೊರ ಬಂದಿದೆ.

ಇತ್ತ ರೇಣುಕಸ್ವಾಮಿ ಹತ್ಯೆ ಪ್ರಕರಣವನ್ನು ಬೇಗನೆ ಇತ್ಯರ್ಥಗೊಳಿಸಲು ಪೊಲೀಸರು ಚಿಂತನೆ ನಡೆಸಿದ್ದು, ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ ಅಥವಾ ಸ್ಪೆಷಲ್ ಕೋರ್ಟ್‌ಗೆ ಮನವಿ ಚಿಂತನೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ್​ ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಈ ಕುರಿತು ಸುದ್ದಿಗೋಷ್ಠಿ ಉದ್ಧೇಶಿಸಿ ಮಾತನಾಡಿದ ದಯಾನಂದ್, ಪ್ರಕರಣವನ್ನು ಬೇಗನೆ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ ಅಥವಾ ಸ್ಪೆಷಲ್ ಕೋರ್ಟ್‌ಗೆ ಮನವಿ ಮಾಡಲು ಚಿಂತನೆ ನಡೆಸಿದ್ದೇವೆ. ಮುಂದೆ ಈ ಬಗ್ಗೆ ಮನವಿ ಮಾಡುವವರಿದ್ದೇವೆ.ಇನ್ನು ಚಾರ್ಜ್​ಶೀಟ್ ವಿಚಾರವಾಗಿ ಮಾತನಾಡಿರುವ ಪೊಲೀಸ್ ಆಯುಕ್ತರು ಬಹುಪಾಲು ರಿಪೋರ್ಟ್​ಗಳು ಚಾರ್ಜ್​ಶೀಟ್ ಸಲ್ಲಿಕೆಗೂ ಮುನ್ನವೇ ನಮ್ಮ ಕೈಸೇರಿವೆ. ಮತ್ತಷ್ಟು ರಿಪೋರ್ಟ್ ಇನ್ನೂ ಬರಬೇಕಿದೆ ಎಂದು ತಿಳಿಸಿದರು.

ಇನ್ನು ಪರಪ್ಪನ ಅಗ್ರಹಾರದಲ್ಲಿ ದರ್ಶನ್​ಗೆ ಸಿಕ್ಕ ರಾಜಾತಿಥ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಬಿ. ದಯಾನಂದ್ ಅವರು ಈಗಾಗಲೇ ಪ್ರಕರಣವನ್ನು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಸಿಸಿಬಿ ಜಂಟಿ ಪೊಲೀಸ್ ಡಾ.ಚಂದ್ರಗುಪ್ತ ನೇತೃತ್ವದಲ್ಲಿ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!