ರಾಜ್ಯ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ: ಗ್ಯಾರಂಟಿ ಯೋಜನೆಗಳಿಗೆ ವಿಕಲಚೇತನರ ಅನುದಾನ ಬಳಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ ಎಸ್ಟಿ ಹಣ ಬಳಸಲಾಗುತ್ತಿದೆ ಎಂದು ವಿಪಕ್ಷಗಳು ಆರೋಪಿಸಿದ್ದವು. ಆದರೆ ಇದೀಗ ಅಂಗವಿಕಲರ ಅನುದಾನದ ಹಣ ಕೂಡ ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂದು ಅಂಧ ಚೇತನ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಗೌತಮ್ ಅಗರ್ವಾಲ್ ಆರೋಪಿಸಿದ್ದಾರೆ

ಅಂಧ ಚೇತನ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಗೌತಮ್ ಅಗರ್ವಾಲ್ ಈ ಒಂದು ಆರೋಪ ಮಾಡಿದ್ದಾರೆ. ಸರ್ಕಾರದಿಂದ ವಿಕಲಚೇತನರಿಗೆ ಶೇಕಡ 80ರಷ್ಟು ಹಣ ಕಡಿತ ಮಾಡಿದ್ದಾರೆ. ಕಳೆದ ವರ್ಷ 54 ಕೋಟಿ ಹಣ ಮೀಸಲಿಟ್ಟಿದ್ದ ಸರ್ಕಾರ, ಈ ವರ್ಷ ಕೇವಲ 10 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದ್ದಾರೆ.

ಫೆಡರೇಷನ್ ಗೆ ಮೀಸಲಿಟ್ಟ ಬಾಕಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಗೌತಮ್ ಅಗರ್ವಾವಾಲ್ ಅವರು ಗಂಭೀರವಾದ ಆರೋಪ ಮಾಡಿದ್ದಾರೆ.

ಈ ವಿಚಾರವಾಗಿ ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ, ಶೋಭಾ ಕರಂದ್ಲಾಜೆ ಎಕ್ಸ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಕಳೆದ ವರ್ಷ ಸರ್ಕಾರ ವಿಕಲಚೇನರ ವಿವಿಧ ಯೋಜನೆಗಳಿಗೆ 53 ಕೋಟಿ ರೂ. ಅನುದಾನ ಮೀಸಲು ಇಡಲಾಗಿತ್ತು. ಆದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಬರೀ 10 ಕೋಟಿ ರೂ. ಅನುದಾನ ಮಾತ್ರ ಹಂಚಿಕೆ ಮಾಡಲಾಗಿದೆ. ಇದು ನಿಜಕ್ಕೂ ದುರದೃಷ್ಟಕರ. ಇದು ದಿವ್ಯಾಂಗರಿಗೆ ಆಗುತ್ತಿರುವ ಅನ್ಯಾಯ. ಇದರಿಂದ ಅವರ ಅಗತ್ಯ ಸೇವೆಗಳಿಗೆ ಧಕ್ಕೆ ಆಗಲಿದೆ. ಮೀಸಲಿಟ್ಟ ನಿಧಿಯನ್ನು ಅವರಿಗಾಗಿ, ಅವರ ಸೇವೆಗಾಗಿ ಉಪಯೋಗಿಸಬೇಕು ಎಂದು ಜೋಶಿ ಆಗ್ರಹಿಸಿದ್ದಾರೆ.

ಈಗಾಗಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ಹಗರಣಗಳನ್ನ ಇಟ್ಟುಕೊಂಡು ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದು, ಇದೀಗ ಈ ಆರೋಪ ಕೂಡ ವಿಪಕ್ಷಗಳಿಗೆ ಒಂದು ಪ್ರಬಲವಾದ ಅಸ್ತ್ರ ವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!