Friday, December 8, 2023

Latest Posts

BIG NEWS | ಮಣಿಪುರದಲ್ಲಿ ಮತ್ತೆ ಪ್ರತಿಭಟನೆ: ಇಂಟರ್ನೆಟ್ ಸೇವೆ ಸ್ಥಗಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  

ಮಣಿಪುರದಲ್ಲಿ ಮತ್ತೆ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.

ಜುಲೈ 6 ರಂದು ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿಟ್ಟುಕೊಂಡು ಬಳಿಕ ಹತ್ಯೆ ಮಾಡಿದ ಫೋಟೋ ವೈರಲ್ ಆಗಿದೆ. ಈ ಫೋಟೋ ವೈರಲ್ ಆಗುತ್ತಿದ್ದಂತೆ ಮಣಿಪುರ ಮತ್ತೆ ಉಗ್ರ ಸ್ವರೂಪ ಪಡೆದುಕೊಂಡಿದೆ.

17 ವರ್ಷದ ಹಿಮಾಜ್ ಲಿಂಥೋಯಿನ್‌ಗಂಬಿ ಹಾಗೂ 20 ವರ್ಷದ ಫಿಮಜ್ ಹೇಮಜಿತ್ ಮೃತ ದುರ್ದೈವಿಗಳು. ಇಬ್ಬರು ಮೈತೇಯಿ ಸಮುದಾಯಕ್ಕೆ ಸೇರಿದವರು ಎನ್ನಲಾಗಿದೆ. ಇಬ್ಬರು ವಿದ್ಯಾರ್ಥಿಗಳನ್ನು ಕಾಡು ಪ್ರದೇಶದ ಹುಲ್ಲಿನ ಮೇಲೆ ಕುಳ್ಳಿರಿಸಲಾಗಿದೆ. ಈ ಫೋಟೋ ವೈರಲ್ ಆದ ಬೆನ್ನಲ್ಲೇ ಇದೇ ವಿದ್ಯಾರ್ಥಿಗಳ ಮೃತದೇಹ ಫೋಟೋ ವೈರಲ್ ಆಗಿದೆ.

ಈ ಫೋಟೋದಿಂದ ಶಾಂತವಾಗಿದ್ದ ಮಣಿಪುರದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಹಿಂಸಾಚಾರದ ವೇಳೆ ಕಾಣೆಯಾಗಿದ್ದರು, ಇವರಿಬ್ಬರು ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿತ್ತು.

ಇದೀಗ 5 ತಿಂಗಳಿಂದ ನಿರ್ಬಂಧವಾಗಿದ್ದ ಮೊಬೈಲ್‌ ಇಂಟರ್ನೆಟ್‌ ಮತ್ತೆ ಸ್ಥಾಪಿತಗೊಂಡ ಬೆನ್ನಲ್ಲೇ ವಿದ್ಯಾರ್ಥಿಗಳ ಫೋಟೋ ವೈರಲ್‌ ಆಗಿದ್ದು, ಪ್ರತಿಭಟನೆ ಆರಂಭವಾಗಿದೆ. ನೂರಾರು ವಿದ್ಯಾರ್ಥಿಗಳು ರಸ್ತೆಗಳಿದು ಪ್ರತಿಭಟನೆ ನಡೆಸಿದ್ದು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿದ್ದಾರೆ.

ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಮುಖ್ಯಮಂತ್ರಿ ಬೀರೇನ್‌ ಸಿಂಗ್‌ ಅವರ ಮನೆಯತ್ತ ಮೆರವಣಿಗೆ ಹೊರಟಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಅಶ್ರುವಾಯು ಬಳಕೆ ಮಾಡಿದ್ದಾರೆ. ಈ ಸಾವಿನ ಬಗ್ಗೆ ಸಿಬಿಐ ಹಾಗೂ ರಾಜ್ಯ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಬೀರೇನ್‌ ಸಿಂಗ್‌ ಹೇಳಿದ್ದಾರೆ.

5 ತಿಂಗಳಿನಿಂದ ಜನಾಂಗೀಯ ಸಂಘರ್ಷಕ್ಕೆ ತುತ್ತಾಗಿದ್ದ ಮಣಿಪುರದಲ್ಲಿ, ಮೇ 3ರಂದು ಸ್ಥಗಿತಗೊಳಿಸಲಾಗಿದ್ದ ಮೊಬೈಲ್‌ ಇಂಟರ್‌ನೆಟ್‌ ಸೇವೆಯನ್ನು ಇದೇ ಶನಿವಾರದಿಂದ ಮರುಸ್ಥಾಪಿಸಲಾಗಿತ್ತು. ಆದರೆ ಎರಡೇ ದಿನಕ್ಕೆ ಮತ್ತೆ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!