ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈಗಾಗಲೇ  ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್​​ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿಯಲ್ಲಿ ಪ್ರಜ್ವಲ್​ ರೇವಣ್ಣ ವಿರುದ್ಧ ಹೊಸದಾಗಿ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದು ಪ್ರಜ್ವಲ್​ ರೇವಣ್ಣ ಅವರ ವಿರುದ್ಧ ದಾಖಲಾದ ಎರಡನೇ ಪ್ರಕರಣವಾಗಿದೆ.

ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಅಧಿಕಾರಿಗಳು, ವಿಡಿಯೋದಲ್ಲಿದ್ದ ಕೆಲ ಮಹಿಳೆಯರನ್ನು ಸಂಪರ್ಕಿಸಿ ದೂರು ನೀಡುವಂತೆ ಹೇಳಿದ್ದರು. ಈ ಪೈಕಿ ಮಹಿಳೆಯೊಬ್ಬರು ಎಸ್​ಐಟಿ ಅಧಿಕಾರಿಗಳ ಬಳಿ ಹೇಳಿಕೆ ನೀಡಿದ್ದಾರೆಂದು ತಿಳಿದುಬಂದಿದೆ. ಮಹಿಳೆ ಯಾರು ಎನ್ನುವ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!