Tuesday, August 9, 2022

Latest Posts

ಮೈಸೂರಿನಲ್ಲಿ ಮತ್ತೊಂದು ಅತ್ಯಾಚಾರ: ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಮೈಸೂರಿನ ಚಾಮುಂಡಿ ಬೆಟ್ಟದ ಬಳಿ ಸಾಮೂಹಿಕ ಅತ್ಯಾಚಾರ ನಡೆದ ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ರಾಜಧಾನಿಯಲ್ಲಿ ಇನ್ನೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಇಲ್ಲಿನ ಆರ್,ಎಸ್ ನಾಯ್ಡು ನಗರದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದ್ದು, ಪ್ರಕರಣದ ದಾಖಲಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸ್ಥಳಕ್ಕೆ ಕೂಡಲೇ ಶ್ವಾನದಳ, ಬೆರಳಚ್ಚು ತಜ್ಞರ ತಂಡ ಪರಿಶೀಲನೆ ನಡೆಸಿದೆ. ಪ್ರದೇಶದಲ್ಲಿ ನೆರೆದಿದ್ದ ಜನರು ಪ್ರಶ್ನೆಗಳಿಗೆ ಉತ್ತರಿಸಿದ್ದು, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss