ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆಯಲಾಗಿದ್ದ ರಾಜ್ಯಾನ್ ಸರಕಾರದ ಕ್ರಮ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಮತ್ತೆ ಸುಪ್ರೀಂ ಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿಕೆ ಮಾಡಿದೆ. ಈ ಮೂಲಕ ಡಿಸಿಎಂ ಡಿಕೆಶಿಗೆ ಮತ್ತೆ ರಿಲೀಫ್ ನೀಡಿದೆ.
ಇಂದು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಉಜ್ಜಲ್ ಭುಯನ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ವಿಚಾರಣೆ ಕೈಗೆತ್ತಿಕೊಂಡರು. ಈ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕರ್ನಾಟಕ ಹೈಕೋರ್ಟ್ ನ ತೀರ್ಪಿನ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದೆ ಎಂಬುದಾಗಿ ನ್ಯಾಯಪೀಠದ ಗಮನಕ್ಕೆ ತಂದರು. ಅಲ್ಲದೇ ಸಿಬಿಐ ಮನವಿಯ ವಿಚಾರಣೆಗೆ ದಿನಾಂಕ ನಿಗದಿಯಾಗಿಲ್ಲ ಎಂಬುದಾಗಿಯೂ ತಿಳಿಸಿದರು. ಈ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ನಾಲ್ಕುವಾರ ವಿಚಾರಣೆ ಮುಂದೂಡಿಕೆ ಮಾಡಿದೆ.