Sunday, December 3, 2023

Latest Posts

ಕರ್ನಾಟಕಕ್ಕೆ ಮತ್ತೆ ಹಿನ್ನಡೆ: ಮುಂದಿನ 15 ದಿನ ತಮಿಳುನಾಡಿಗೆ 3,000 ಕ್ಯೂಸೆಕ್‌ ನೀರು ಹರಿಸಲು ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ಕಾವೇರಿ ನೀರು ಹಂಚಿಕೆ ವಿವಾದದ ಕುರಿತು ಕಾವೇರಿ ನೀರು ನಿಯಂತ್ರಣಾ ಸಮಿತಿ (Cauvery Water Regulatory Committee-CWRC) ಸಭೆ ನಡೆದಿದ್ದು, ಮತ್ತೆ ಕರ್ನಾಟಕಕ್ಕೆ ಹಿನ್ನಡೆ ಉಂಟಾಗಿದೆ.ಮುಂದಿನ 15 ದಿನಗಳ ಕಾಲ ತಲಾ 3,000 ಕ್ಯೂಸೆಕ್‌ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶ ನೀಡಿದೆ.

15 ದಿನಗಳ ಕಾಲ 13 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ತಮಿಳುನಾಡು ಬೇಡಿಕೆ ಇಟ್ಟಿತ್ತು. ಅದರೆ CWRC ಕರ್ನಾಟಕಕ್ಕೆ 15 ದಿನಗಳ ಕಾಲ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದೆ.

ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಅಧಿಕಾರಿಗಳು ಭಾಗಿಯಾಗಿದ್ದು, ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗಿದೆ.ಮಳೆಯಾಗುತ್ತಿದ್ದರು ಕರ್ನಾಟಕ ಸರಿಯಾಗಿ ನೀರು ಹರಿಸಿಲ್ಲ ಎಂದು ವಾದ ಮಂಡಿಸಿದೆ.

ಸಿಡಬ್ಲ್ಯೂಎಂಎ ಆದೇಶವನ್ನು ಕರ್ನಾಟಕ ಸರಿಯಾಗಿ ಪಾಲಿಸುತ್ತಿಲ್ಲ. ಮಳೆ ಹೆಚ್ಚಾಗಿರುವ ಪ್ರಮಾಣ ಆಧರಿಸಿ ನೀರನ್ನು ಹರಿಸಬೇಕು. ಪ್ರತಿದಿನ 13000 ಕ್ಯೂಸೆಕ್ ನೀರು ಹರಿಸಬೇಕು ಎಂದು ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ತಮಿಳುನಾಡು ಅಧಿಕಾರಿಗಳ ವಾದ ಮಂಡಿಸಿದ್ದಾರೆ.

ಇದೆಲ್ಲಾ ಆದ ನಂತರ ಮತ್ತೆ ಸಿಡಬ್ಲ್ಯೂ ಆರ್ ಸಿ ಯು ಕರ್ನಾಟಕಕ್ಕೆ ಪ್ರತಿನಿತ್ಯ ತಮಿಳುನಾಡಿಗೆ 15 ದಿನಗಳವರೆಗೆ 3000 ಕ್ಕೆ ನೀರು ಹರಿಸುವಂತೆ ಸೂಚನೆ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!