ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಹಣದ ವ್ಯವಹಾರ ಕುರಿತು ಐಟಿ ಅಧಿಕಾರಿಗಳಿಂದಲೂ ತನಿಖೆ ಆರಂಭವಾಗಲಿದೆ.
ಗುರುವಾರ ಅಥವಾ ಶುಕ್ರವಾರ ಬಳ್ಳಾರಿ ಜೈಲಿಗೆ ಐಟಿ ಅಧಿಕಾರಿಗಳು ಬರಲಿದ್ದಾರೆ. ಈಗಾಗಲೇ ಆರೋಪಿ ದರ್ಶನ್ ವಿಚಾರಣೆಗೆ ಕೋರ್ಟ್ ಅದೇಶ ನೀಡಿದೆ. ಜೊತೆಗೆ ಐಟಿ ಅಧಿಕಾರಿಗಳಿಗೆ ಸಹಕಾರ ನೀಡುವಂತೆ ಕೋರ್ಟ್‌ನಿಂದ ಜೈಲಿಗೆ ಇ-ಮೇಲ್ ಕಳುಹಿಸಲಾಗಿದೆ. ಹಣ ಕೊಟ್ಟು ಕೊಲೆ ಆರೋಪವನ್ನು ಮತ್ತೊಬ್ಬರ ಮೇಲೆ ಹೊರಿಸಲು ಪ್ಲಾನ್ ಮಾಡಲಾಗಿತ್ತು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಅಷ್ಟೊಂದು ಹಣ ಎಲ್ಲಿಂದ ಬಂತು? ಹೇಗೆಲ್ಲ ಹಣ ವರ್ಗಾವಣೆ ಮಾಡಲಾಗಿದೆ? ಎನ್ನುವ ನಿಟ್ಟಿನಲ್ಲಿ ವಿಚಾರಣೆ ನಡೆಸಲಿರುವ ಐಟಿ ಅಧಿಕಾರಿಗಳು ಹಣದ ಮೂಲ ಪತ್ತೆಗೆ ಮುಂದಾಗಿದ್ದು, ಐಟಿ ಅಧಿಕಾರಿಗಳು ಬರುವುದನ್ನು ಜೈಲು ಮೂಲಗಳು ಖಚಿತಪಡಿಸಿವೆ.
ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಆರೋಪವನ್ನು ಮತ್ತಿಬ್ಬರ ಮೇಲೆ ಹೊರಿಸಲು ಪ್ಲ್ಯಾನ್ ಮಾಡಿದ್ದರು. ಇದಕ್ಕಾಗಿ ಲಕ್ಷಾಂತರ ಹಣ ಖರ್ಚು ಮಾಡಿದ್ದರು. ಅಷ್ಟು ದೊಡ್ಡ ಮೊತ್ತದ ಕ್ಯಾಶ್ ಎಲ್ಲಿಂದ ಬಂತು? ಹೇಗೆಲ್ಲ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಬಗ್ಗೆ ಐಟಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ. ಸದ್ಯ ಐಟಿ ಅಧಿಕಾರಿಗಳು ಬರುವುದನ್ನು ಜೈಲಾಧಿಕಾರಿಗಳು ಖಚಿತಪಡಿಸಿದ್ದಾರೆ.