Saturday, January 10, 2026

ನಟ ವಿಜಯ್ ಗೆ ಮತ್ತೊಂದು ಶಾಕ್: ಸೌದಿ ಅರೆಬಿಯಾದಲ್ಲಿ ‘ಜನ ನಾಯಗನ್’ ಬ್ಯಾನ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಈಗಾಗಲೇ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದೆ.

ಇತ್ತ ರಾಜಕೀಯಕ್ಕೆ ಎಂಟ್ರಿ ನೀಡಿರುವ ವಿಜಯ್, ‘ಜನ ನಾಯಗನ್’ ಬಳಿಕ ತಾವು ಇನ್ಯಾವುದೇ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದಿದ್ದಾರೆ. ಹೀಗಾಗಿ ಸಿನಿಮಾ ವೀಕ್ಷಿಸಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ.

ವಿಜಯ್​ಗೆ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅಮೆರಿಕ, ಮಲೇಷ್ಯಾ, ಸಿಂಗಪುರ, ಗಲ್ಫ್ ರಾಷ್ಟ್ರಗಳಲ್ಲೂ ಅಭಿಮಾನಿಗಳನ್ನು ವಿಜಯ್ ಹೊಂದಿದ್ದಾರೆ. ಆದರೆ ಇದೀಗ ಸೌದಿ ಅರೆಬಿಯಾನಲ್ಲಿ ವಿಜಯ್ ಅವರ ‘ಜನ ನಾಯಗನ್’ ಸಿನಿಮಾದ ಮೇಲೆ ನಿಷೇಧ ಹೇರಲಾಗಿದೆ.

ಸೌದಿ ರಾಷ್ಟ್ರಗಳಲ್ಲಿ ಭಾರತೀಯ ಸಿನಿಮಾಗಳಿಗೆ ಒಳ್ಳೆಯ ಮಾರುಕಟ್ಟೆ ಇದೆ. ಅಲ್ಲಿನ ಅನಿವಾಸಿ ಭಾರತೀಯರ ಜೊತೆಗೆ ಸ್ವತಃ ಸೌದಿ ಜನರೂ ಸಹ ಭಾರತದ ಸಿನಿಮಾಗಳ ಅಭಿಮಾನಿಗಳಾಗಿದ್ದಾರೆ. ಆದರೆ ಆಗಾಗ್ಗೆ ಕೆಲವು ಭಾರತೀಯ ಸಿನಿಮಾಗಳ ಮೇಲೆ ನಿಷೇಧಗಳನ್ನು ಹೇರುತ್ತಲೇ ಬಂದಿವೆ ಗಲ್ಫ್ ರಾಷ್ಟ್ರಗಳು. ಇತ್ತೀಚೆಗಷ್ಟೆ ಬಿಡುಗಡೆ ಆಗಿ ಭಾರತದಲ್ಲಿ ಬ್ಲಾಕ್ ಬಸ್ಟರ್ ಆಗಿರುವ ‘ಧುರಂಧರ್’ ಸಿನಿಮಾಕ್ಕೂ ಸಹ ಸೌದಿ ರಾಷ್ಟ್ರ ನಿಷೇಧ ಹೇರಿದೆ. ಇದೀಗ ವಿಜಯ್ ಅವರ ಕೊನೆಯ ಸಿನಿಮಾಕ್ಕೂ ನಿಷೇಧ ಹೇರಿದೆ ಎನ್ನಲಾಗುತ್ತಿದೆ.

ಸಾಮಾನ್ಯವಾಗಿ ಪಾಕಿಸ್ತಾನ ಅಥವಾ ಯಾವುದೇ ಮುಸ್ಲಿಂ ರಾಷ್ಟ್ರ ವಿರೋಧಿ ಅಂಶಗಳು ಅಥವಾ ಇಸ್ಲಾಂ ಧರ್ಮವನ್ನು ಟೀಕಿಸುವ, ಮುಸ್ಲಿಂ ರಾಷ್ಟ್ರಗಳನ್ನು ಖಳರಂತೆ ಬಿಂಬಿಸುವ ಸಿನಿಮಾಗಳನ್ನು ಸೌದಿ ರಾಷ್ಟ್ರಗಳು ನಿಷೇಧಿಸುತ್ತಾ ಬಂದಿವೆ. ‘ಧುರಂಧರ್’ ಸಿನಿಮಾ ನಿಷೇಧಕ್ಕೂ ಇದೇ ಕಾರಣವಾಗಿತ್ತು. ಇದೀಗ ‘ಜನ ನಾಯಗನ್’ ನಿಷೇಧಕ್ಕೂ ಇದೇ ಕಾರಣ ಎನ್ನಲಾಗುತ್ತಿದೆ.

‘ಜನ ನಾಯಗನ್’ ಸಿನಿಮಾದ ವಿಲನ್ ಪಾಕಿಸ್ತಾನದ ವ್ಯಕ್ತಿಯಾಗಿದ್ದು, ಸಿನಿಮಾನಲ್ಲಿ ಸಹ ಪಾಕಿಸ್ತಾನದ ವಿರುದ್ಧ, ಪಾಕ್ ಸೈನ್ಯದ ವಿರುದ್ಧ ಸಂಭಾಷಣೆಗಳು, ದೃಶ್ಯಗಳು ಇವೆ. ಟ್ರೈಲರ್​​ನಲ್ಲಿ ಸಹ ಕೆಲವು ದೃಶ್ಯಗಳನ್ನು ಸೇರಿಸಲಾಗಿದೆ. ಇದೇ ಕಾರಣಕ್ಕೆ ‘ಜನ ನಾಯಗನ್’ ಸಿನಿಮಾಕ್ಕೆ ಸೌದಿಯಲ್ಲಿ ಸೆನ್ಸಾರ್ ನಿರಾಕರಿಸಲಾಗಿದೆಯಂತೆ. ಆದರೆ ಚಿತ್ರತಂಡವು, ಕೆಲವು ಸಂಭಾಷಣೆಗಳನ್ನು ಬದಲಾಯಿಸಿ, ಮ್ಯೂಟ್ ಮಾಡಿ ಹಾಗೂ ಕೆಲವನ್ನು ಡಿಲೀಟ್ ಮಾಡುವ ಮೂಲಕ ‘ಜನ ನಾಯಗನ್’ ಸಿನಿಮಾಕ್ಕೆ ಸೆನ್ಸಾರ್ ಪಡೆಯಲು ಮುಂದಾಗಿದೆ ಎನ್ನಲಾಗುತ್ತಿದೆ.

error: Content is protected !!