May 28, 2026
Thursday, May 28, 2026
spot_img

ಚೆನ್ನೈ ಸೂಪರ್ ಕಿಂಗ್ಸ್‌ಗೆ ಮತ್ತೊಂದು ಶಾಕ್: ಗಾಯದಿಂದ ಯುವ ವೇಗಿ ಔಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಾಯದ ಸಮಸ್ಯೆಗಳಿಂದಲೇ ಸಂಕಷ್ಟದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್‌ಗೆ ಇದೀಗ ಮತ್ತೊಂದು ಹಿನ್ನಡೆ ಎದುರಾಗಿದೆ. ಇತ್ತೀಚೆಗೆ ತಂಡದಲ್ಲಿ ಅವಕಾಶ ಪಡೆದಿದ್ದ ಯುವ ವೇಗಿ ರಾಮಕೃಷ್ಣ ಘೋಷ್ ಗಂಭೀರ ಗಾಯಕ್ಕೆ ತುತ್ತಾಗಿದ್ದು, ಉಳಿದ ಐಪಿಎಲ್ ಪಂದ್ಯಗಳಿಂದ ಹೊರಬಿದ್ದಿದ್ದಾರೆ. ಈ ಬೆಳವಣಿಗೆ ಸಿಎಸ್‌ಕೆ ಶಿಬಿರಕ್ಕೆ ದೊಡ್ಡ ಹೊಡೆತವಾಗಿ ಪರಿಣಮಿಸಿದೆ.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿದ ರಾಮಕೃಷ್ಣ, ಮೊದಲ ಪಂದ್ಯದಲ್ಲೇ ಗಮನಾರ್ಹ ಪ್ರದರ್ಶನ ನೀಡಿ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ವಿಕೆಟ್ ಕಬಳಿಸಿದ್ದರು. ಆದರೆ ಅದೇ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಗಾಯಗೊಂಡ ಅವರು ಇದೀಗ ವಿಶ್ರಾಂತಿಗೆ ಒಳಗಾಗಬೇಕಾದ ಪರಿಸ್ಥಿತಿ ಎದುರಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಬಲಗಾಲಿನ ಮೂಳೆ ಮುರಿತವಾಗಿರುವುದು ದೃಢಪಟ್ಟಿದೆ.

ಇದನ್ನೂ ಓದಿ:

ಈಗಾಗಲೇ ಹಲವು ಆಟಗಾರರು ಗಾಯದಿಂದ ಹೊರಬಿದ್ದಿರುವ ಸಿಎಸ್‌ಕೆಗೆ ಇದು ಮತ್ತಷ್ಟು ತಲೆನೋವಾಗಿ ಪರಿಣಮಿಸಿದೆ. ಪ್ರಮುಖ ಆಟಗಾರರ ಅನುಪಸ್ಥಿತಿಯ ನಡುವೆ ಯುವ ಪ್ರತಿಭೆಯೂ ಕಣದಿಂದ ಹೊರನಡೆಯುತ್ತಿರುವುದು ತಂಡದ ಸಮತೋಲನಕ್ಕೆ ಧಕ್ಕೆಯಾಗಿದೆ. ಉಳಿದ ಪಂದ್ಯಗಳಲ್ಲಿ ಈ ಕೊರತೆಯನ್ನು ಚೆನ್ನೈ ಹೇಗೆ ನಿಭಾಯಿಸುತ್ತದೆ ಎಂಬುದು ಕುತೂಹಲ ಮೂಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !