September 27, 2026
Sunday, September 27, 2026
spot_img

ದೀದಿಗೆ ಮತ್ತೆ ಶಾಕ್‌: ರಾಜ್ಯಸಭಾ ಸದಸ್ಯತ್ವಕ್ಕೆ ಸುಖೇಂದು ಶೇಖರ್, ಕೋಯೆಲ್ ಮಲ್ಲಿಕ್ ರಾಜೀನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತೃಣಮೂಲ ಕಾಂಗ್ರೆಸ್‌ನ ಸಂಸದ ಸುಖೇಂದು ಶೇಖರ್‌ ರಾಯ್‌, ಕೋಯೆಲ್‌ ಮಲ್ಲಿಕ್ ಅವರು ರಾಜ್ಯಸಭಾ ಸದಸ್ಯತ್ವಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.

ಪಕ್ಷವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಮಾಜಿ ಸಿಎಂ ಮಮತಾ ಬ್ಯಾನರ್ಜಿಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಇಬ್ಬರ ರಾಜೀನಾಮೆಯಿಂದಾಗಿ ಬಿಕ್ಕಟ್ಟು ಡಬಲ್‌ ಆಗಿದೆ.

ಹಿರಿಯ ನಾಯಕರು ಹಾಗೂ ರಾಜ್ಯಸಭೆಯಲ್ಲಿ ಟಿಎಂಸಿಯ ಗಟ್ಟಿ ಧ್ವನಿಗಳಲ್ಲಿ ಒಬ್ಬರಾಗಿದ್ದ ಸುಖೇಂದು ಶೇಖ‌ರ್ ಅವರು ರಾಜ್ಯಸಭಾ ಸಭಾಪತಿಗೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಇದೀಗ ಇಬ್ಬರು ಸದಸ್ಯರ ರಾಜೀನಾಮೆಯಿಂದಾಗಿ ಸದಸ್ಯರ ಬಲ 11ಕ್ಕೆ ಇಳಿಯಲಿದೆ.

Must Read