ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಗನ ಪೆನ್‍ಡ್ರೈವ್ ಪ್ರಕರಣದಿಂದ ಆರಂಭವಾಗಿ ಇದೀಗ ಅಪ್ಪನಿಗೂ ಸಂಕಷ್ಟ ಎದುರಾಗಿದೆ. ಇದೀಗ ಮತ್ತೊಂದು ಆರೋಪದ ಪಟ್ಟಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿದೆ.
ಹೆಚ್.ಡಿ.ರೇವಣ್ಣ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯ ಮಗ ಮೈಸೂರು ಜಿಲ್ಲೆಯ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ರೇವಣ್ಣ ವಿರುದ್ಧ ಎಫ್‍ಐಆರ್ ದಾಖಲಾಗಿದೆ.