ಐಪಿಎಲ್ ಆರಂಭಕ್ಕೂ ಮುನ್ನ ಗುಜರಾತ್ ಟೈಟಾನ್ಸ್ ಗೆ ಮತ್ತೊಂದು ಶಾಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಹುನಿರೀಕ್ಷಿತ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಇದೇ ಮಾರ್ಚ್ 22ರಿಂದ ಆರಂಭವಾಗಲಿದೆಇದರ ನಡುವೆ ಗುಜರಾತ್ ಟೈಟಾನ್ಸ್ ಪಾಲಿಗೆ ಪದೇ ಪದೇ ಶಾಕ್ ಎದುರಾಗುತ್ತಿದೆ.

ಟೂರ್ನಿ ಆರಂಭಕ್ಕೂ ಮುನ್ನ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ, ಗುಜರಾತ್ ಟೈಟಾನ್ಸ್ ತಂಡವನ್ನು ತೊರೆದು ಮುಂಬೈ ಇಂಡಿಯನ್ಸ್ ತಂಡ ಕೂಡಿಕೊಂಡಿದ್ದರು.ಗುಜರಾತ್ ಟೈಟಾನ್ಸ್ ತಂಡದ ಪ್ರಮುಖ ವೇಗಿ ಮೊಹಮ್ಮದ್ ಶಮಿ, ಗಾಯದ ಸಮಸ್ಯೆಯಿಂದಾಗಿ ಸರ್ಜರಿಗೆ ಒಳಗಾಗಿ ಸಂಪೂರ್ಣ ಐಪಿಎಲ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಇದೆಲ್ಲದರ ನಡುವೆ ಗಾಯದ ಮೇಲೆ ಬರೆ ಎಳೆದಂತೆ ಟೈಟಾನ್ಸ್‌ನ ಪ್ರತಿಭಾನ್ವಿತ ಕ್ರಿಕೆಟಿಗ ರಾಬಿನ್ ಮಿನ್ಜು ಕೂಡಾ ಇತ್ತೀಚೆಗಷ್ಟೇ ರಸ್ತೆ ಅಪಘಾತಕ್ಕೊಳಗಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ರಾಬಿನ್ ಮಿನ್ಜು ಅವರನ್ನು ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಹರಾಜಿನಲ್ಲಿ 3.6 ಕೋಟಿ ರುಪಾಯಿ ನೀಡಿ ಖರೀದಿಸಿತ್ತು.

ಇದೀಗ ಗುಜರಾತ್ ಟೈಟಾನ್ಸ್ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು, ತಂಡದ ಸ್ಪೋಟಕ ಬ್ಯಾಟರ್ ಮ್ಯಾಥ್ಯೂ ವೇಡ್‌ ಆರಂಭಿಕ ಐಪಿಎಲ್ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.

ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟರ್ ಮ್ಯಾಥ್ಯೂ ವೇಡ್, ಗುಜರಾತ್ ಟೈಟಾನ್ಸ್ ಆಡಲಿರುವ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಮಾರ್ಚ್ 21ರಿಂದ 25ರ ವರೆಗೆ ವೇಡ್ ಶೆಫೀಲ್ಡ್ ಶೀಲ್ಡ್‌ ಫೈನಲ್ ಪಂದ್ಯ ನಡೆಯಲಿದ್ದ, ವೇಡ್ ಟಾಸ್ಮೇನಿಯಾ ತಂಡದ ಪರ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ.

ಟೂರ್ನಿಯು ಮಾರ್ಚ್ 22ರಿಂದ ಆರಂಭವಾಗಲಿದ್ದು, ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ.

ಇನ್ನು ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ಮಾರ್ಚ್ 24ರಂದು ತವರಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಎದುರು ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ವೇಡ್ ಅನುಪಸ್ಥಿತಿ ಟೈಟಾನ್ಸ್ ತಂಡವನ್ನು ಕಾಡುವ ಸಾಧ್ಯತೆ ಕಡಿಮೆ. ಯಾಕೆಂದರೆ ಟೈಟಾನ್ಸ್ ತಂಡದಲ್ಲಿ ಮೊದಲ ಆಯ್ಕೆಯ ವಿಕೆಟ್ ಕೀಪರ್ ಬ್ಯಾಟರ್ ರೂಪದಲ್ಲಿ ವೃದ್ದಿಮಾನ್ ಸಾಹ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!