ಕೇಜ್ರಿವಾಲ್‌ಗೆ ಮತ್ತೊಂದು ಆಘಾತ, ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ವಜಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದೆಹಲಿ ಮದ್ಯನೀತಿ ಹಗರಣ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿರುವ ಅರವಿಂದ್ ಕೇಜ್ರಿವಾಲ್ಗೆ ಮತ್ತೊಂದು ದೊಡ್ಡ ಶಾಕ್‌ ಆಗಿದೆ. ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ವಿರುದ್ಧ ವಿಜಿಲೆನ್ಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಅವರನ್ನು ವಜಾಗೊಳಿಸಲಾಗಿದೆ.

ವಿಭವ್ ಕುಮಾರ್ ನೇಮಕ ಪ್ರಕ್ರಿಯೆ ಸರಿಯಾಗಿ ನಡೆದಿರಲಿಲ್ಲ ಎನ್ನುವ ಕಾರಣ ಕೊಟ್ಟು ಅವರನ್ನು ವಿಚಕ್ಷಣ ಇಲಾಖೆ ವಜಾಗೊಳಿಸಿದೆ. ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ಅವರನ್ನು ಕೆಲವು ದಿನಗಳ ಹಿಂದೆ ಇಡಿ ವಿಚಾರಣೆ ನಡೆಸಿದ ಸಮಯದಲ್ಲಿ ವಿಜಿಲೆನ್ಸ್ ಇಲಾಖೆ ಅವರ ವಿರುದ್ಧ ಕ್ರಮ ಕೈಗೊಂಡಿದೆ.

ಇದತ ಜೊತೆಗೆ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿರುವಾಗಲೇ ದೆಹಲಿ ಸಚಿವ ರಾಜ್ ಕುಮಾರ್ ಆನಂದ್ ತಮ್ಮ ಸ್ಥಾನ ಮತ್ತು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಬಲವಾದ ಸಂದೇಶವನ್ನ ನೋಡಿದ ನಂತರ ನಾನು ಎಎಪಿಗೆ ಸೇರ್ಪಡೆಗೊಂಡಿದ್ದೆ. ಆದ್ರೆ ಇಂದು ಪಕ್ಷವು ಭ್ರಷ್ಟ ಆಚರಣೆಗಳ ಮಧ್ಯದಲ್ಲಿದೆ. ಅದಕ್ಕಾಗಿಯೇ ನಾನು ಪಕ್ಷ ತ್ಯಜಿಸಲು ನಿರ್ಧರಿಸಿದ್ದೇನೆ ಎಂದು ದೆಹಲಿ ಸಚಿವ ರಾಜ್ ಕುಮಾರ್ ಆನಂದ್ ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!