ಪಾಕಿಸ್ತಾನಕ್ಕೆ ಮತ್ತೊಂದು ಶಾಕ್: ರಕ್ಷಣಾ ಸಚಿವರ ಎಕ್ಸ್ ಖಾತೆಗೆ ಭಾರತದಲ್ಲಿ ಬ್ಲಾಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಹಲ್ಗಾಮ್​ ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನ ವಿರುದ್ಧ ಒಂದರ ಮೇಲೊಂದು ನಿರ್ಧಾರ ತೆಗೆದುಕೊಳ್ಳುತ್ತಿರುವ ಕೇಂದ್ರ ಸರಕಾರ ಇದೀಗ ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸೀಫ್​ ಅವರ ಎಕ್ಸ್​​ ಜಾಲತಾಣಕ್ಕೆ ಭಾರತದಲ್ಲಿ ತಡೆ ನೀಡಿದೆ.

ಭಾರತದ ವಿರುದ್ಧವಾಗಿ ದ್ವೇಷ ಹಾಗೂ ನಕಲಿ ಸುದ್ದಿ ಪ್ರಸಾರ ಮಾಡುತ್ತಿರುವ ಪಾಕಿಸ್ತಾನದ 16 ಯೂಟ್ಯೂಬ್ ಚಾನಲ್ ಗಳನ್ನು ಕೇಂದ್ರಸರ್ಕಾರ ನಿಷೇಧಿಸಿತ್ತು. ಈ ಘಟನೆ ಬೆನ್ನಲ್ಲೇ, ಇದೀಗ ಪಾಕ್​ ರಕ್ಷಣಾ ಸಚಿವರ ಸಾಮಾಜಿಕ ಜಾಲತಾಣದ ಖಾತೆಯನ್ನು ನಿರ್ಬಂಧಿಸಲಾಗಿದೆ.

ಕಳೆದ ವಾರವಷ್ಟೇ, ಪಾಕಿಸ್ತಾನ ರಕ್ಷಣಾ ಸಚಿವರು ಸಂದರ್ಶನದಲ್ಲಿ ಪಾಕಿಸ್ತಾನ ಭಯೋತ್ಪಾದಕ ಸಂಘಟನೆಗೆ ಬೆಂಬಲ ನೀಡಿ, ಫಂಡಿಂಗ್​ಗೆ ಬೆಂಬಲ ನೀಡುತ್ತಿರುವ ಬಗ್ಗೆ ಒಪ್ಪಿಕೊಂಡ ವಿಡಿಯೋ ವೈರಲ್​ ಆಗಿತ್ತು.

ಪಾಕಿಸ್ತಾನ ರಕ್ಷಣಾ ಸಚಿವ ಖವಾಜ ಮೊಹಮ್ಮದ್ ಎಕ್ಸ್ ಮೂಲಕ ಆತಂಕ ಸೃಷ್ಟಿಸುವ ಹೇಳಿಕೆ ನೀಡುತ್ತಿದ್ದರು. ಪೆಹಲ್ಗಾಮ್ ದಾಳಿ, ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಜನರನ್ನು ಎತ್ತಿಕಟ್ಟುವ ಪ್ರಯತ್ನವನ್ನೂ ಪಾಕಿಸ್ತಾನ ರಕ್ಷಣಾ ಸಚಿವ ಮಾಡಿದ್ದರು. ಇದೀಗ ಭಾರತ ಸರ್ಕಾರ ಪಾಕಿಸ್ತಾನ ರಕ್ಷಣಾ ಸಚಿವರರ ಎಕ್ಸ್ ಖಾತೆ ಬ್ಲಾಕ್ ಮಾಡಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!