ರಾಜ್ ಕುಟುಂಬಕ್ಕೆ ಮತ್ತೊಂದು ಆಘಾತ: ಪಾರ್ವತಮ್ಮ ರಾಜ್‌ಕುಮಾರ್ ಸಹೋದರಿ ವಿಧಿವಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪುನೀತ್‌ ರಾಜ್‌ಕುಮಾರ್‌ ಅವರನ್ನು ಕಳೆದುಕೊಂಡು ದುಃಖದಲ್ಲಿರುವ ರಾಜ್ ಕುಟುಂಬಕ್ಕೆ ಮತ್ತೊಂದು ಆಘಾತ ಸುದ್ದಿ. ಪಾರ್ವತಮ್ಮ ರಾಜ್‌ಕುಮಾರ್ ಅವರ ಸಹೋದರಿ ಎಸ್‌.ಎ.ನಾಗಮ್ಮ ಇಂದು (ಮೇ 14) ವಿಧಿವಶರಾಗಿದ್ದಾರೆ.
81 ವರ್ಷ ವಯಸ್ಸಿನ ನಾಗಮ್ಮ, ಕಳೆದ ಎರಡು ವಾರಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು . ಇಂದು ಬೆಳಗ್ಗೆ ನಗರದ ಬಸವೇಶ್ವರ ನಗರದಲ್ಲಿ ತಮ್ಮ ಮಗನ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಹೋದರಾದ ಎಸ್.ಎ.ಚಿನ್ನೇಗೌಡ, ಎಸ್‌.ಎ.ಗೋವಿಂದರಾಜು, ಎಸ್.ಎ.ಶ್ರೀನಿವಾಸ್, ಸಹೋದರಿ ಜಯಮ್ಮ, ಮಗ ಮಹೇಶ್ʼರನ್ನ ಎಸ್‌.ಎ.ನಾಗಮ್ಮ ಅಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!