ಶಿಕ್ಷಕರಿಗೆ ಮತ್ತೆ ಶಾಕ್: ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ರದ್ದು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ರದ್ದುಗೊಳಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಶಿಕ್ಷಕರಿಗೆ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯೋಜನೆಗೆ ಪ್ರಕ್ರಿಯೆ ಕೈಗೊಂಡಿದ್ದು, ಇದನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕವಾಗಿ ಮತ್ತು ಮುಂದಿನ ಆದೇಶದವರೆಗೆ ರದ್ದುಗೊಳಿಸಲಾಗಿದೆ.
ಜನವರಿ 24ರಂದು ಕೌನ್ಸೆಲಿಂಗ್ ನಲ್ಲಿ ಯಾವುದಾದರೂ ಹೆಚ್ಚುವರಿ ಶಿಕ್ಷಕರಿಗೆ ಸ್ಥಳ ನಿಯೋಜನೆ ಆದೇಶ ನೀಡಿದ್ದಲ್ಲಿ ಅದನ್ನು ಹಿಂಪಡೆಯಲು ಸೂಚಿಸಲಾಗಿದೆ. ಪರಿಷ್ಕೃತ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!