ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಸಾವು’ ಗೆದ್ದು ಬಂದ ನಟಿ ಪೂನಂ ಪಾಂಡೆಗೆ ಈಗ ಇನ್ನೊಂದು ಶಾಕ್ ಸಿದ್ಧವಾಗಿದೆ.
ಪೂನಂ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಶಾಸಕ ಸತ್ಯಜೀತ್ ತಾಂಬೆ ಮುಂಬೈ ಪೊಲೀಸರಿಗೆ ಸೂಚನೆ ಕೊಟ್ಟಿದ್ದಾರೆ.
ಸಾವಿನ ಸುದ್ದಿ ನೀಡಿ ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಸಾಧ್ಯವಿಲ್ಲ. ಇದು ಕ್ಯಾನ್ಸರ್ ಬಾಧಿತರನ್ನು ಗೇಲಿ ಮಾಡಿದಂತೆ. ಪ್ರಚಾರಕ್ಕಾಗಿ ಇಂತಹ ಗಿಮಿಕ್ ಮಾಡುವ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಅವರು ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.