ಸೋತ ಚೆನ್ನೈ ಸೂಪರ್ ಕಿಂಗ್ಸ್ ಗೆ ಮತ್ತೊಂದು ಆಘಾತ: ಧೋನಿಗೆ ಇಂಜುರಿ, ಸ್ಟಾರ್ ಬೌಲರ್ ಗೂ ಗಾಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜಸ್ಥಾನ ರಾಯಲ್ಸ್ ವಿರುದ್ಧದ ಬುಧವಾರ ನಡೆದ ಪಂದ್ಯದಲ್ಲಿ ಸೋತ ಚೆನ್ನೈ ಸೂಪರ್ ಕಿಂಗ್ಸ್ (CSK vs RR) ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ.
ತಂಡದ ಆನಾಯಕ ಮಹೇಂದ್ರ ಸಿಂಗ್ ಧೋನಿ (Ms Dhoni) ಮೊಣಕಾಲು ಇಂಜುರಿಯಿಂದ ಬಳಲುತ್ತಿದ್ದಾರೆ .

ರಾಜಸ್ಥಾನ ವಿರುದ್ಧದ ಪಂದ್ಯದ ನಂತರ ತಂಡದ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ (Stephen Fleming) ಈ ವಿಷಯದ ಬಗ್ಗೆ ಮಾತನಾಡಿದ್ದು, ಧೋನಿ ಮೊಣಕಾಲು ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ವಿಕೆಟ್​ಗಳ ಮಧ್ಯೆ ಓಡಲು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಎರಡು ರನ್ ಬರಬೇಕಾದ ಸಂದರ್ಭಗಳಲ್ಲಿ, ಅವರು ಕೇವಲ ಸಿಂಗಲ್ ಮಾತ್ರ ತೆಗೆದುಕೊಳ್ಳುತ್ತಿದ್ದರು. ನಮ್ಮ ವೈದ್ಯಕೀಯ ತಂಡ ಸದ್ಯ ಧೋನಿ ಮೇಲೆ ನಿಗಾ ಇರಿಸಿದೆ. ನಮ್ಮ ಮುಂದಿನ ಪಂದ್ಯಕ್ಕೆ ನಾಲ್ಕು ದಿನ ಬಾಕಿ ಇದೆ. ಹಾಗಾಗಿ ಅದಕ್ಕೂ ಮುನ್ನ ಧೋನಿ ಚೇತರಿಸಿಕೊಳ್ಳುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದರು.

ಚೆನ್ನೈ ತನ್ನ ಮುಂದಿನ ಪಂದ್ಯದಲ್ಲಿ ಬೆಂಗಳೂರನ್ನು (RCB) ಎದುರಿಸಲಿದೆ. ಏಪ್ರಿಲ್ 17 ರಂದು ಬೆಂಗಳೂರಿನ ಚಿನ್ನ ಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.

ಧೋನಿ ಗಾಯಗೊಂಡಿರುವುದರೊಂದಿಗೆ ದಕ್ಷಿಣ ಆಫ್ರಿಕಾದ ವೇಗಿ ಸಿಸಂಡಾ ಮಗಾಲಾ ಕೂಡ ಕೈಗೆ ಗಾಯ ಮಾಡಿಕೊಂಡಿದ್ದಾರೆ. ಅವರ ಗಾಯದ ಬಗ್ಗೆಯೂ ಫ್ಲೆಮಿಂಗ್ ಮಾಹಿತಿ ನೀಡಿದ್ದು, ನಮ್ಮ ತಂಡದ ಮತ್ತೊಬ್ಬ ಕ್ರಿಕೆಟಿಗ ಗಾಯಗೊಂಡಿದ್ದಾರೆ. ನಮ್ಮ ತಂಡದಲ್ಲಿ ಕ್ರಿಕೆಟಿಗರ ಸಂಖ್ಯೆ ಕ್ರಮೇಣ ಕಡಿಮೆಯಾಗುತ್ತಿದೆ. ಇದರಿಂದ ಬೇರೆಯವರಿಗೆ ತೊಂದರೆಯಾಗದಂತೆ ಎಚ್ಚರ ವಹಿಸಬೇಕು. ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ವೇಳೆ ಮಗಾಲಾ ಕೈಗೆ ಗಾಯವಾಗಿತ್ತು. ಇದರಿಂದಾಗಿ ಅವರು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಕೊನೆಯ 2 ಓವರ್‌ಗಳಲ್ಲಿ ಬೌಲಿಂಗ್ ಮಾಡಲು ಸಹ ಸಾಧ್ಯವಾಗಲಿಲ್ಲ. ಹಿಂದಿನ ಪಂದ್ಯದಲ್ಲಿ ದೀಪಕ್ ಚಹರ್ ಕೂಡ ಇದೇ ರೀತಿಯ ಇಂಜುರಿಗೆ ತುತ್ತಾಗಿದ್ದರು. ಇದರಿಂದ ನಮ್ಮ ತಂಡದಲ್ಲಿ ಫಿಟ್ ಆಗಿರುವ ಆಟಗಾರರ ಸಂಖ್ಯೆ ಕಡಿಮೆಯಾಗಿದೆ. ಇದೀಗ ಇಂಜುರಿಗೊಂಡಿರುವ ಮಗಾಲಾ ಐಪಿಎಲ್‌ನಿಂದ 2 ವಾರಗಳ ಕಾಲ ದೂರ ಉಳಿಯಲಿದ್ದಾರೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!